ಪಿರಿಯಾಪಟ್ಟಣ: ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರನ್ನು ಪರಿಷತ್ ಚುನಾವಣೆಯಲ್ಲಿ ಆಯ್ಕೆ ಮಾಡುವಂತೆ ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಕೊಪ್ಪ ರಾಜೇಂದ್ರ ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರ ಪರ ಪಟ್ಟಣ ಸೇರಿದಂತೆ ತಾಲೂಕಿನ ವಿವಿದೆಡೆಯ ಶಿಕ್ಷಣ ಸಂಸ್ಥೆ ಶಾಲಾ ಕಾಲೇಜುಗಳಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.
ಪ್ರಾಮಾಣಿಕವಾಗಿ ರಾಜಕಾರಣ ಮಾಡಿದ್ದ ದಿವಂಗತ ಕೆ.ವಿ ಶಂಕರೇಗೌಡರ ಪುತ್ರರಾದ ವಿವೇಕಾನಂದರವರು ಶಿಕ್ಷಕರ ಆಶೋತ್ತರಗಳನ್ನು ಈಡೇರಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಅವರ ಸದುದ್ದೇಶ ಈಡೇರಿಸಲು ಶಿಕ್ಷಕರು ಮತ ನೀಡಬೇಕು ಎಂದು ಮನವಿ ಮಾಡಿದರು.

ತಂಬಾಕು ಮಂಡಳಿ ನಿರ್ದೇಶಕರು ಮಾಜಿ ಶಾಸಕರಾದ ಎಚ್.ಸಿ ಬಸವರಾಜು ಅವರು ಮಾತನಾಡಿ ಹಲವು ವರ್ಷಗಳಿಂದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರ ಮತ್ತು ಶೈಕ್ಷಣಿಕ ಕ್ಷೇತ್ರದ ಪ್ರಗತಿಗಾಗಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರ ಗೆಲುವಿಗೆ ಶಿಕ್ಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಜಯರಾಮೇಗೌಡ, ತಂಬಾಕು ಮಂಡಳಿ ನಿರ್ದೇಶಕ ವಿಕ್ರಮ್ ರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಚೆನ್ನಬಸವರಾಜು, ರವಿ, ಮುಖಂಡರಾದ ಆರ್.ಟಿ.ಸತೀಶ್, ಲೋಕಪಾಲಯ್ಯ, ಸುನೀಲ್, ಬೆಟ್ಟದಪುರ ಮಲ್ಲೇಶ್, ಬೆಮ್ಮತ್ತಿ ಚಂದ್ರು, ಮದನ್ ರಾಜೆಅರಸ್ ಮತ್ತಿತರಿದ್ದರು.