ರಾಮನಗರ: ಕ್ರೀಡಾಕೂಟದಲ್ಲಿ ಮಹಿಳೆಯರು ಪಾಲ್ಗೊಂಡು, ಇಂತಹ ಕ್ರೀಡಾಕೂಟಗಳ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಸತೀಶ್ ಅವರು ತಿಳಿಸಿದರು.
ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ಎಲ್ಲರೂ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕಿವಿ ಮಾತು ಹೇಳಿ ಶುಭ ಕೋರಿದರು. ಪೊಲೀಸ್ ಇನ್ಸ್‌ಪೆಕ್ಟರ್ ಆಕಾಶ್ ಅವರು ಮಾತನಾಡಿ ಚಿಕ್ಕ ವಯಸ್ಸಿನಿಂದ ಎಲ್ಲರೂ ಒಂದಲ್ಲಾ ಒಂದು ಕ್ರೀಡೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿರುತ್ತೇವೆ. ಮಹಿಳೆಯರೆ ಆಗಲಿ ಪುರುಷರೆ ಈ ಕ್ರೀಡೆಯನ್ನು ತಮ್ಮ ಜೀವನದಲ್ಲಿ ಆರೋಗ್ಯಕ್ಕಾಗಿ ಹಾಗೂ ಮಾನಸಿಕ ಸಧೃಡತೆಗಾಗಿ ಅಳವಡಿಸಿಕೊಳ್ಳಬೇಕು. ಕ್ರೀಡೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಧೃಡತೆಯನ್ನು ನೀಡುತ್ತದೆ ಎಂದು ತಿಳಿಸಿದರು.
ಮಹಿಳಾ ಕ್ರೀಡಾಕೂಟದಲ್ಲಿ ವಾಲಿಬಾಲ್, ಥ್ರೋಬಾಲ್, ಟೆನಿಕಾಯ್ಟ್ ಮತ್ತು ಹಗ್ಗ-ಜಗ್ಗಾಟ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ, ಚನ್ನಪಟ್ಟಣ ತಾಲ್ಲೂಕು ದೈಹಿಕ ಪರಿವೀಕ್ಷಕರಾದ ಭಾರತಿ, ತಾಲ್ಲೂಕು ದೈಹಿಕ ಅಧ್ಯಕ್ಷರಾದ ರಂಗಶಾಮಯ್ಯ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ವಿಶ್ವನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.