Friday, April 11, 2025
Google search engine

Homeರಾಜ್ಯಸುದ್ದಿಜಾಲಎನ್‌ಎಸ್‌ಎಸ್ ಶಿಬಿರಗಳಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಬೌದ್ಧಿಕ ವಿಕಾಸಕ್ಕೆ ಕಾರಣ -ಎಲ್.ಪಿ.ರವಿಕುಮಾರ್

ಎನ್‌ಎಸ್‌ಎಸ್ ಶಿಬಿರಗಳಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಬೌದ್ಧಿಕ ವಿಕಾಸಕ್ಕೆ ಕಾರಣ -ಎಲ್.ಪಿ.ರವಿಕುಮಾರ್

ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಅನುಭವವನ್ನು ಪಡೆಯಬಹುದು ಎಂದು ಎಪಿಎಂಸಿ ಮಾಜಿ ನಿರ್ದೇಶಕ ಎಲ್.ಪಿ.ರವಿಕುಮಾರ್ ಹೇಳಿದರು.

ತಾಲೂಕಿನ ಲಾಲನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆದ ಎನ್‌ಎಸ್‌ಎಸ್ ಶಿಬಿರದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಓದಿನ ಜತೆಗೆ ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದು ಅವರ ಬೌದ್ದಿಕ ವಿಕಾಸಕ್ಕೆ ಕಾರಣವಾಗಲಿದೆ ಎಂದರು.

ಕಾಲೇಜಿನ ವತಿಯಿಂದ ಏಳು ದಿನಗಳ ವರೆಗೆ ಗ್ರಾಮದಲ್ಲಿ ಎನ್‌ಎಸ್‌ಎಸ್ ಶಿಬಿರ ಹಮ್ಮಿಕೊಂಡಿದ್ದು ಇಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರಿಗೂ ಗ್ರಾಮೀಣ ಜನ ಜೀವನದ ಅನುಭವ ಆಗುವುದರ ಜತೆಗೆ ಅವರ ಸಂಕಷ್ಟವು ಅರ್ಥವಾಗಲಿದ್ದು, ಈ ಅನುಭವವನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಖಿಲ ವೀರಶೈವ ಮಹಾ ಸಭಾ ತಾಲೂಕು ಘಟಕದ ಅಧ್ಯಕ್ಷ ಕೆಂಪರಾಜು ಮಾತನಾಡಿ ಕೆ.ಆರ್.ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಮ್ಮ ಗ್ರಾಮದಲ್ಲಿ ಎನ್‌ಎಸ್‌ಎಸ್ ಶಿಬಿರ ಆಯೋಜಿಸಿರುವುದು ಎಲ್ಲರಿಗೂ ಸಂತಸದ ವಿಚಾರವಾಗಿದ್ದು ನಾವು ಶಿಬಿರ ನಡೆಯುವ ದಿನಗಳಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಘೋಷಿಸಿದರು.

ಕಾಲೇಜು ಡಾ.ಬಿ.ಎಸ್.ಜಯ ಮಾತನಾಡಿ ಕಾಲೇಜು ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಅಭ್ಯಾಸದ ಜತೆಗೆ ಸಾರ್ವಜನಿಕ ಜೀವನದ ಅನುಭವ ಪಡೆಯಲು ಮತ್ತು ಹಿಂದುಳಿದ ಗ್ರಾಮಗಳಿಗೆ ತೆರಳಿ ಅವರಿಗೆ ಪರಿಜ್ಞಾನ ಮೂಡಿಸಲು ೫೦ ವರ್ಷಗಳ ಹಿಂದೆ ಎನ್‌ಎಸ್‌ಎಸ್ ಶಿಬಿರ ನಡೆಸುವ ಕೆಲಸ ಮಾಡುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಶಿಬಿರದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕು ಎಂದು ಕಿವಿ ಮಾತು ಹೇಳಿದರು.
ಮೇ.೨೧ರಿಂದ ೨೭ರವರೆಗೆ ಏಳು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಕಾಲೇಜಿನ ೧೦೦ ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದು ನಿತ್ಯ ಶಿಬಿರದ ನಿಯಮಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತಿದ್ದು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಗ್ರಾ.ಪಂ. ಸದಸ್ಯರಾದ ಉಮೇಶ್, ಗುರು, ಎಸ್‌ಡಿಎಂಸಿ ಅಧ್ಯಕ್ಷ ಮಹದೇವಪ್ಪ, ಶಾಲಾ ಮುಖ್ಯ ಶಿಕ್ಷಕ ರೇವಣ್ಣ, ಶಿಭಿರಾಧಿಕಾರಿಗಳಾದ ಎಂ.ವಿ.ರಾಘವೇoದ್ರ, ಎಂ.ಮಮತ, ಮೂಲೆಪೆಟ್ಲುಪ್ರದೀಪ್, ಎಂ.ವoದನ, ಉಪನ್ಯಾಸಕರಾದ ಬಿ.ಪಿ.ದಯಾನಂದ್, ತಿಪ್ಪೇಸ್ವಾಮಿ, ಮಂಜುನಾಥ್, ಕೃಷ್ಣಮೂರ್ತಿ, ಸಾಗರ್ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು.

RELATED ARTICLES
- Advertisment -
Google search engine

Most Popular