Thursday, April 3, 2025
Google search engine

HomeUncategorizedರಾಷ್ಟ್ರೀಯಪತಂಜಲಿ ಆಯುರ್ವೇದ ದಾರಿತಪ್ಪಿಸುವ ಜಾಹೀರಾತು: ರಾಮ್‌ದೇವ್ ವಿರುದ್ಧ ಕೇರಳ ನ್ಯಾಯಾಲಯ ಬಂಧನ ವಾರಂಟ್ ಜಾರಿ

ಪತಂಜಲಿ ಆಯುರ್ವೇದ ದಾರಿತಪ್ಪಿಸುವ ಜಾಹೀರಾತು: ರಾಮ್‌ದೇವ್ ವಿರುದ್ಧ ಕೇರಳ ನ್ಯಾಯಾಲಯ ಬಂಧನ ವಾರಂಟ್ ಜಾರಿ

ಹೊಸದಿಲ್ಲಿ: ಪತಂಜಲಿ ಆಯುರ್ವೇದ ತನ್ನ ಆರೋಗ್ಯ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ಕೇರಳ ಔಷಧ ನಿಯಂತ್ರಕರು ದೂರು ದಾಖಲಿಸಿದ ನಂತರ, ಯೋಗ ಗುರು ರಾಮದೇವ್ ಮತ್ತು ಅವರ ಸಹಚರ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.

ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯವು ಗುರುವಾರ (ಜನವರಿ 16) ವಾರಂಟ್ ಹೊರಡಿಸಿದೆ ಎಂದು ʼದಿ ಟೆಲಿಗ್ರಾಫ್ʼ ವರದಿ ಮಾಡಿದೆ.

ಕಣ್ಣೂರು ಮೂಲದ ನೇತ್ರಶಾಸ್ತ್ರಜ್ಞ ಕೆ.ವಿ. ಬಾಬು ಅವರು ನವೆಂಬರ್ 2023 ರಲ್ಲಿ ಹಲವಾರು ದೂರುಗಳನ್ನು ಸಲ್ಲಿಸಿದ ನಂತರ, ಕೇರಳದ ಔಷಧ ನಿಯಂತ್ರಣ ಇಲಾಖೆಯು 1954 ರ ಔಷಧ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಪತಂಜಲಿ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಲು ರಾಜ್ಯಾದ್ಯಂತ ಆದೇಶ ಹೊರಡಿಸಿದೆ.

“ದೂರುದಾರರು ಗೈರುಹಾಜರಾಗಿದ್ದಾರೆ. ಎಲ್ಲಾ ಆರೋಪಿಗಳು ಭಾಗಿಯಾಗಿದ್ದಾರೆ. ಆರೋಪಿಗಳಿಗೆ ಜಾಮೀನು ನೀಡಬಹುದಾದ ವಾರಂಟ್” ಎಂದು ಪಾಲಕ್ಕಾಡ್ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೆಲವು ಪತಂಜಲಿ ಆಯುರ್ವೇದ ಉತ್ಪನ್ನಗಳು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಕಾಯಿಲೆಗಳನ್ನು ಗುಣಪಡಿಸಬಹುದು ಎಂದು ಜಾಹೀರಾತುಗಳಲ್ಲಿ ಹೇಳಿಕೊಂಡಿದ್ದವು. ಅಂತಹ ಜಾಹೀರಾತುಗಳನ್ನು ಈಗಾಗಲೇ ಡಿಎಂಆರ್ ಕಾಯ್ದೆಯಡಿಯಲ್ಲಿ ನಿಷೇಧಿಸಲಾಗಿದೆ.

ದೂರುದಾರರಾದ ಬಾಬು ಎಂಬವರು 2022 ರಲ್ಲಿ ಕೇಂದ್ರ ಮತ್ತು ರಾಜ್ಯದ ಸಂಬಂದಪಟ್ಟ ಇಲಾಖೆಗಳಿಗೆ ದೂರು ನೀಡಿದ್ದರು. ಅಲ್ಲದೇ ಜನವರಿ 2024 ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ ತಮ್ಮ ದೂರುಗಳನ್ನು ಕಳುಹಿಸಿದ್ದರು.

ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದರೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದ ನಂತರ ಪಾಲಕ್ಕಾಡ್ ನ್ಯಾಯಾಲಯ ವಾರಂಟ್ ಹೊರಡಿಸಿದೆ.

RELATED ARTICLES
- Advertisment -
Google search engine

Most Popular