ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.
ಇದೇ ಆಗಸ್ಟ್ 19ರಂದು ಪವಿತ್ರಾಗೌಡ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು (ಆ.28) ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಅರ್ಜಿ ವಿಚಾರಣೆ ನಡೆಸಿತು. ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಿದ ನಂತರ ಎಸ್‌ಪಿಪಿ ವಾದ ಮಂಡಿಸಿದರು. ಪವಿತ್ರಾಗೌಡ ಪರ ಟಾಮಿ ಸೆಬಾಸ್ಟಿಯನ್ ವಾದಿಸಿದರು. ಸುದೀರ್ಘ ವಿಚಾರಣೆ ಬಳಿಕ ಕೋರ್ಟ್ ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿತು.