Sunday, April 20, 2025
Google search engine

Homeರಾಜ್ಯಪೆನ್‌ಡ್ರೈವ್ ಹಂಚಿಕೆ ಪ್ರಕರಣ : ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಹೈಕೋರ್ಟ್ ಮೊರೆ

ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಹೈಕೋರ್ಟ್ ಮೊರೆ

ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣದ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್.ಆರ್.ನವೀನ್ ಕುಮಾರ್, ಎನ್.ಕಾರ್ತಿಕ್, ಬಿ.ಸಿ. ಚೇನತ್ ಕುಮಾರ್ ಮತ್ತು ಎಚ್.ವಿ.ಪುಟ್ಟರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿಸಲ್ಲಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಏಜೆಂಟ್ ಆಗಿದ್ದ ಎಂ.ಜಿ.ಪೂರ್ಣಚಂದ್ರ ತೇಜಸ್ವಿ, ಹಾಸನ ಸಿಇಎನ್ ಪೊಲೀಸ್ ಠಾಣೆಗೆ ೨೦೨೪ರ ಎ.೨೩ರಂದು ದೂರು ನೀಡಿದ್ದರು. ಇದರಿಂದ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹಾಸನದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ ನ್ಯಾಯಾಲಯವು ಮೇ.೮ರಂದು ಆದೇಶಿಸಿತ್ತು. ಹಾಗಾಗಿ, ಈ ನಾಲ್ವರು ಆರೋಪಿಗಳು ಹೈಕೊರ್ಟ್ ಮೊರೆ ಹೋಗಿದ್ದರು.

RELATED ARTICLES
- Advertisment -
Google search engine

Most Popular