Sunday, April 20, 2025
Google search engine

Homeರಾಜ್ಯಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರಿಗೆ ಜಾಮೀನು ಮಂಜೂರು- ಬೃಹತ್ ಪ್ರತಿಭಟನೆ

ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರಿಗೆ ಜಾಮೀನು ಮಂಜೂರು- ಬೃಹತ್ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಚೇತನ್‌ ಗೌಡ ಹಾಗೂ ಲಿಖಿತ್‌ ಗೌಡಗೆ ಹಾಸನದ ನ್ಯಾಯಾಲಯ ಜಾಮೀನು ಮಂಜೂರಾಗಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಲಿಖಿತ್ ಗೌಡ ಹಾಗೂ ಚೇತನ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೇ.12ರಂದು ಬಂಧಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಗೂ ಜಾಮೀನು ಸಿಕ್ಕಿದ್ದು ಇದರೊಂದಿಗೆ 18 ದಿನಗಳ ಜೈಲು ವಾಸ ಅಂತ್ಯಗೊಂಡಂತಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದ್ದು ಎಸ್ ಐಟಿ ಅಧಿಕಾರಿಗಳು ಏರ್ಪೋಟ್ ನಲ್ಲಿ ಬೀಡು ಬಿಟ್ಟಿದ್ದಾರೆ.

ಆರೋಪಿಗಳ ಬಂಧನಕ್ಕೆ ಬೃಹತ್ ಪ್ರತಿಭಟನೆ:

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಬಂಧನ ಹಾಗೂ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದು ಆರೋಪಿಗಳನ್ನು ಕೂಡಲೇ ಬಂಧಿಸಿ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಯಾವುದೇ ಕಾರಣಕ್ಕೂ ಆರೋಪಿಗಳಿಗೆ ಜಾಮೀನು ಸಿಗಬಾರದು ಎಂದು ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular