Sunday, April 20, 2025
Google search engine

Homeಅಪರಾಧಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಪ್ರೀತಂ ಗೌಡರನ್ನು ಬಂಧಿಸದಂತೆ ಆದೇಶ ನೀಡಿದ ಹೈಕೋರ್ಟ್

ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಪ್ರೀತಂ ಗೌಡರನ್ನು ಬಂಧಿಸದಂತೆ ಆದೇಶ ನೀಡಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಪ್ರೀತಂ ಗೌಡಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಪ್ರಕರಣ ಸಂಬಂಧ ಪ್ರೀತಂ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ನೀಡುವುದರ ಜೊತೆಗೆ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಈ ಆರೋಪಕ್ಕೆ ಪೂರಕವೆಂಬಂತೆ ಅವರ ಇಬ್ಬರ ಆಪ್ತರನ್ನೂ ಎಸ್‌ಐಟಿ ಬಂಧಿಸಿತ್ತು. ಎಸ್‌ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

RELATED ARTICLES
- Advertisment -
Google search engine

Most Popular