ಮೈಸೂರು : ಸಂಸದರ ಟಿಕೆಟ್ ನಿರ್ಧಾರ ಮಾಡುವುದು ಜನ. ಜನ ಖುಷಿಯಾಗಿದ್ದರೂ ಅದೇ ನಿರ್ಧಾರ ಮಾಡುತ್ತಾರೆ. ನನ್ನ ಕೆಲಸವೇ ನನಗೆ ಶ್ರೀರಕ್ಷೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಅವರು ಸುದ್ದಿಗಾರರೊಂದಿಗೆ ಲೋಕಸಭಾ ಟಿಕೆಟ್ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ರಾಜ್ಯದಲ್ಲಿ 28 ಮಂದಿ ಸಂಸದರು. ಅವರ ಸಾಧನೆ ನೋಡಿ ಟಿಕೆಟ್. ಕ್ಷೇತ್ರದ ಜನ ಖುಷಿಯಾದ್ದಾರೆ ಎಂದರೆ, ಪಕ್ಷದ ಹೈಕಮಾಂಡ್ ಕೂಡ ಅದೇ ನಿರ್ಧಾರ ಮಾಡಲಿದೆ. ಮೈಸೂರಿನಲ್ಲಿ ನಾನು ಇಂತಹ ಕೆಲಸ ಮಾಡಿಲ್ಲ ಎಂದು ಯಾರಾದರೂ ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಇಲ್ಲ, ನನ್ನನ್ನು ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾರೆ ಎಂದು ಹೇಳಿದರು.
ಮೈಸೂರಿನಲ್ಲಿ ಯಾವ ಜನಪ್ರತಿನಿಧಿಗಳು ಮಾಡಿರದ ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದ್ದೇನೆ. ಗ್ರೇಟರ್ ಮೈಸೂರು ಮಾಡಲು ಮುಂದಾಗಿದ್ದು, ಈವರೆಗೆ ಹಲವು ಅಭಿವೃದ್ಧಿ ಯೋಜನೆಗಳನ್ನು ತಂದಿದ್ದೇನೆ. ಹಿಂದೂತ್ವದ ಪರ ಕೆಲಸ ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಹೊರ ವರ್ತುಲ ರಸ್ತೆ ತರಲು ಆಗಿಲ್ಲ. ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಫೆರಲ್ ರಿಂಗ್ ರೋಡ್ ತರಲು ಮುಂದಾಗಿದ್ದೇನೆ. ನನ್ನ ಕೆಲಸವೇ ನನಗೆ ಶ್ರೀರಕ್ಷೆ, ಮೈಸೂರು-ಕೊಡಗು ಜನರು ನನ್ನ ಕೈ ಹಿಡಿಯುತ್ತಾರೆ. ತಾಯಿ ಚಾಮುಂಡಿ ನನ್ನ ಕೈ ಬಿಡುವುದಿಲ್ಲ. ಈ ಬಾರಿಯೂ ನಾನು ೨ ರಿಂದ ೩ ಲಕ್ಷ ಮತಗಳಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿಮಗೆ ಟಿಕೆಟ್ ನೀಡುವ ಬಗ್ಗೆ ಸ್ವಪಕ್ಷದವರಿಂದಲೇ ವಿರೋಧವಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದೆ. ರಾಜಕೀಯದಲ್ಲಿ ದ್ವೇಷ ಅಸೂಯೆ ಇರುತ್ತೆ.
ಮೈಸೂರು-ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದು ನಿಲ್ಲುವುದಿಲ್ಲ. ಯಾರ ಪಕ್ಷದ ಅಭರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್ ನೋಡಿದರೆ ಗೊತ್ತಾಗುತ್ತೆ ಅಂದೆ. ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾದಾಗ ನಿಂತಿದ್ದು ನಾನು. ಬಿಜೆಪಿ ಕಾರ್ಯಕರ್ತರು ಖುಷಿ ಪಡುವ ಎಂಪಿ ಇದ್ದರೆ ನಾನೇ. ಈ ವಿಚಾರವಾಗಿ ಪ್ರತಾಪ್ ಸಿಂಹ ಎರಡು ಕೇಸ್ ಹಾಕಿಸಿಕೊಂಡಿದ್ದಾನೆ. ಪ್ರತಾಪ್ ಸಿಂಹ ರೂಲರ್ ಅಲ್ಲ, ಕೆಲಸಗಾರ. ಈ ಭಾಗದಲ್ಲಿ ಹನುಮ ಜಯಂತಿ ಆಗುತ್ತಿದೆ ಅದಕ್ಕೆ ಪ್ರತಾಪ್ ಸಿಂಹ ಕಾರಣ. ಜನರು ನನ್ನ ಕೈ ಹಿಡಿಯಲು ರೆಡಿ ಇದ್ದಾರೆ. ಪಕ್ಷ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ ಎಂದರು.