Friday, April 11, 2025
Google search engine

Homeರಾಜ್ಯಕಾನೂನು ವಿರೋಧಿ ಕೃತ್ಯ ಎಸಗುವವರನ್ನು ಸಹಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಕಾನೂನು ವಿರೋಧಿ ಕೃತ್ಯ ಎಸಗುವವರನ್ನು ಸಹಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ದೇವರು ಧರ್ಮದ ವಿಚಾರದಲ್ಲಿ ಕೃತ್ಯ ಎಸಗುವವರನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ, ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ, ರಾಗಿ ಗುಡ್ಡದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ಸಂಬಂಧ ನಡೆದ ಘಟನೆ ಭಾಗವಾಗಿ ೪೦ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ.

ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಬೇರೆಯವರು ಅವರ ಕಾರ್ಯಕ್ಕೆ ದಕ್ಕೆ ತರುವಂತದ್ದು, ಕಲ್ಲು ತೂರಾಟ ನಡೆಸುವುದು ಕಾನೂನು ಬಾಹಿರ ಚಟುವಟಿಕೆ. ಇಂತಹ ಚಟುವಟಿಕೆಯನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಹತ್ತಿಕ್ಕುತ್ತೇವೆ. ಪೊಲೀಸರು ಸೂಕ್ತ ಸಮಯದಲ್ಲಿ ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ. ಶಾಂತಿ ನೆಲೆಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ. ಲಾಠಿ ಚಾರ್ಜ್ ಬಳಿಕ ಶಿವಮೊಗ್ಗ ನಗರದ ರಾಗಿಗುಡ್ಡ ಪ್ರದೇಶದಲ್ಲಿ ಶಾಂತಿ ನೆಲೆಸಿದೆ. ಪೊಲೀಸರ ಕ್ರಮದಿಂದ ಪರಿಸ್ಥಿತಿ ಶಾಂತವಾಗಿದೆ ಎಂದು ಅವರು ತಿಳಿಸಿದರು.

RELATED ARTICLES
- Advertisment -
Google search engine

Most Popular