Saturday, April 19, 2025
Google search engine

Homeರಾಜ್ಯಸುದ್ದಿಜಾಲವಿಕಲಚೇತನರು, ನಾಗರಿಕರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಿ : ನ್ಯಾ. ಅನಿತಾ ಎನ್.ಪಿ

ವಿಕಲಚೇತನರು, ನಾಗರಿಕರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಿ : ನ್ಯಾ. ಅನಿತಾ ಎನ್.ಪಿ

ರಾಮನಗರ: ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಪಡೆದುಕೊಳ್ಳಿ ಹಾಗೂ ಸೌಲಭ್ಯದಿಂದ ಯಾರು ಸಹ ವಂಚಿತರಾಗಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು.

ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ-೨೦೨೩ರ ಅಂಗವಾಗಿ ಜಿಲ್ಲೆಯ ಹಿರಿಯ ನಾಗರಿಕರಿಗಾಗಿ ನಗರದ ಗುರುಭವನದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿರಿಯ ನಾಗರಿಕರ ಆರೋಗ್ಯ ವೃದ್ಧಿಸಲು ಕ್ರೀಡಾ ಕಾರ್ಯಕ್ರಮಗಳು ಸಹಕಾರಿಯಾಗಿದೆ. ವಿಕಚೇತನರು ಹಾಗೂ ಹಿರಿಯ ನಾಗರಿಕರು ಗುರುತಿನ ಚೀಟಿ ಪಡೆದುಕೊಂಡಿರುಬೇಕು. ಗುರುತಿನ ಚೀಟಿ ಪಡೆದುಕೊಂಡಿದ್ದಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳು ದೊರೆಯುತ್ತದೆ. ಇಲ್ಲವಾದಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಿರಿಯ ನಾಗರಿಕರು ಸರ್ಕಾರದಿಂದ ಸೌಲಭ್ಯಗಳನ್ನು ಪಡೆಯುವಲ್ಲಿ ಮುಂದಾಗಬೇಕು ಎಂದರು.

ವಿಕಚೇತನರು ಹಾಗೂ ಹಿರಿಯ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಇದ್ದಲಿ ಕಾನೂನಿನ ಮುಖಾಂತರ ಮುಂದುವರೆದೆ ಒಳ್ಳೆಯ ನ್ಯಾಯ ಸಿಗುತ್ತದೆ ಎಂದರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನೀರ್ದೆಶರಾದ ನಾರಾಯಣ ಸ್ವಾಮಿ ಅವರು ಮಾತನಾಡಿ, ಜಗತ್ತು ಬಲಿಷ್ಠವಾಗಿ ಇರಲು ನಮ್ಮ ಹಿರಿಯರು ಕಾರಣ ನಾವುಗಳು ಅವರನ್ನು ಗೌರವಿಸಬೇಕು. ಒಂದು ಮನೆಯಲ್ಲಿ ಹಿರಿಯರು ಇದ್ದರೆ ನಾವು ಸುಖ ಸಂಸಾರವನ್ನು ನಡೆಸಬಹುದು ಹಿರಿಯರು ನಡೆದು ಬಂದ ದಾರಿಯಲ್ಲಿ ನಾವುಗಳು ಹೋದರೆ ನಮಗೆ ಯಶಸ್ಸು ಸಿಗುತ್ತದೆ ಎಂದರು.
ವಿಕಲಚೇತನರು ಹಾಗೂ ಹಿರಿಯರ ಮನಸ್ಸು ಮಕ್ಕಳ ರೀತಿಯಲ್ಲಿ ಇರುತ್ತದೆ ನಾವು ಅವರನ್ನು ಚನ್ನಾಗಿ ನೋಡಿಕೊಳ್ಳಬೇಕು ಎಂದರು.

ಸರ್ಕಾರದಿಂದ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಸಿಗುವ ಸೌಲಭ್ಯದ ಕುರಿತು ಗೊಂದಲಗಳಿದ್ದರೆ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಂದ್ರ ಬಿ.ಎಲ್ ಅವರು ಮಾತನಾಡಿ, ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಮುಖಾಂತರ ಅವರಲ್ಲಿ ಚೈತನ್ಯ ಮೂಡಿಸಿ ಅವರಲ್ಲಿರುವ ಕಲೆಗಳನ್ನು ಗುರುತಿಸಿ, ಅವರ ಮುಖದಲ್ಲಿ ನಗುವನ್ನು ತರಿಸುವ ಸಲುವಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular