Wednesday, April 9, 2025
Google search engine

Homeರಾಜ್ಯಜನಪರ ಉದ್ದೇಶವಿಲ್ಲದ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿ.ಕೆ. ಶಿವಕುಮಾರ್

ಜನಪರ ಉದ್ದೇಶವಿಲ್ಲದ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಇಂದು ಗುರುವಾರ ಉತ್ತರಿಸಿದರು. ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು ಗಣಿ ಲೂಟಿ ಖಂಡಿಸಿ ರಾಜ್ಯ ಹಾಗೂ ದೇಶದ ಸಂಪತ್ತು ರಕ್ಷಣೆಗೆ ಬಳ್ಳಾರಿ ಪಾದಯಾತ್ರೆ ಮಾಡಿದೆವು. ಕಾವೇರಿ ಜಲಾನಯನದ ೧೦ ಜಿಲ್ಲೆಗಳಿಗೆ ನೀರು ಒದಗಿಸುವ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ್ದೆವು ಎಂದು ತಿಳಿಸಿದರು.

ಅವರ ಪಾದಯಾತ್ರೆಯಲ್ಲಿ ಬೇರೆ ಏನಾದರೂ ಮಹತ್ವದ ವಿಚಾರವಿದೆಯೇ ಅವರ ತಟ್ಟೆಯಲ್ಲೇ ಹೆಗ್ಗಣ ಬಿದ್ದಿದ್ದರೂ ಬೇರೆಯವರ ತಟ್ಟೆ ನೋಡುತ್ತಿದ್ದಾರೆ. ಅವರ ಪಾದಯಾತ್ರೆಗೆ ಜನರಿಂದ ಸ್ಪಂದನೆಯಿಲ್ಲ. ರಾಮನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಡೆದ ಪಾದಯಾತ್ರೆಯಲ್ಲಿ ಎಷ್ಟು ಜನ ಜೆಡಿಎಸ್ ಕಾರ್ಯಕರ್ತರು ಇದ್ದರು ಎಂಬುದನ್ನು ಮಾಧ್ಯಮಗಳ ಬಳಿ ಇರುವ ವಿಡಿಯೋಗಳಲ್ಲಿ ನೋಡಿ. ರಾಜ್ಯದ ಬೇರೆ ಬೇರೆ ಭಾಗಗಳಿಂದ ಬಿಜೆಪಿ ಕಾರ್ಯಕರ್ತರನ್ನು ಪಾದಯಾತ್ರೆಗೆ ಕರೆಸಲಾಗಿದೆ. ಅವರಲ್ಲಿ ಹೊಂದಾಣಿಕೆ ಎಲ್ಲಿದೆ ಒಗ್ಗಟ್ಟು ಎಲ್ಲಿದೆ ಅವರ ನಡುವೆ ಸಮನ್ವಯತೆ ಇಲ್ಲ ಎಂದು ಅವರೇ ಹೇಳಿದ್ದಾರೆ. ಅವರು ಒಂದಾಗಿರಲಿ ಅಥವಾ ಬೇರೆಯಾಗಿರಲಿ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular