ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳ ಸೂಚನೆ
ಮೈಸೂರು: ಸರ್ಕಾರ ಮಾತ್ರ ಬದಲಾಗಿಲ್ಲ, ಆಡಳಿತ ವ್ಯವಸ್ಥೆಯೂ ಬದಲಾಗಬೇಕು. ಜನ ಬಯಸಿದಂತೆ ಬದಲಾವಣೆ ಕಾಣಬೇಕು. ಇಲ್ಲವಾದರೆ ನಾವು ಕಾಣಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಮ್ಮದೇ ಧಾಟಿಯಲ್ಲಿ ಎಚ್ಚರಿಕೆ ನೀಡಿದರು.
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೈಸೂರಿಗೆ ಆಗಮಿಸಿದ ಅವರು ನಗರದ ಜಿಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಪ್ರತಿ ಮೂರು ತಿಂಗಳಿಗೆ ಒಮ್ಮೆ ಜಿಲ್ಲಾಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕಡ್ಡಾಾಯವಾಗಿ ಪ್ರಗತಿ ಪರಿಶೀನಲಾ ಸಭೆ ನಡೆಸಬೇಕು. ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ತಾಲೂಕು ಮಟ್ಟದಲ್ಲಿ ತಹಸೀಲ್ದಾಾರ್ ಮತ್ತು ಇಒಗಳ ಜತೆಗೂಡಿ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಈ ಸಭೆಗಳಲ್ಲಿ ಶಾಸಕರೂ ಪಾಲ್ಗೊಳ್ಳುತ್ತಾಾರೆ. ಐಜಿ, ಎಸ್ಪಿ ಮೊದಲಾದವರು ಸಂಬಂಧಿಸಿದ ಪೊಲೀಸ್ ಠಾಣೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರೆ ಜನರ ಸಮಸ್ಯೆ ಅರ್ಥವಾಗುತ್ತದೆ ಎಂದರು.
ಜನರ ಬಳಿ ಅಧಿಕಾರಿಗಳು ದರ್ಪದಿಂದ ನಡೆದುಕೊಂಡರೆ ನಡೆಯುವುದಿಲ್ಲ. ಅಧಿಕಾರಿಗಳು ಜನಸಂಪರ್ಕ ಸಭೆಗಳನ್ನು ನಡೆಸಿ ಸಾರ್ವಜನಿಕರ ಕಷ್ಟ ವಿಚಾರಿಸಬೇಕು. ಸರ್ಕಾರದ ಎಲ್ಲಾಾ ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಮತ್ತು ಎಲ್ಲಾ ಶಾಸಕರು ಸಹಕರಿಸಬೇಕು. ಅವರು ಹೇಳಿದರು.
ಗ್ರಾಾಪಂ ಅಧ್ಯಕ್ಷರು ಮತ್ತು ಪಿಡಿಒಗಳ ನಡುವೆ ಅನೇಕ ಕಡೆಗಳಲ್ಲಿ ಹೊಂದಾಣಿಕೆ ಕೊರತೆ ಇದೆ. ಅದನ್ನು ಜಿಪಂ ಸಿಇಒ ಸರಿಪಡಿಸಬೇಕು. ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಲವು ಜಿಲ್ಲೆಗಳಲ್ಲಿ ನೀರಿಗೆ ತೊಂದರೆಯಾಗಿದೆ. ಕಲುಷಿತ ನೀರು ಸೇವಿಸಿ ಸಮಸ್ಯೆಯಾಗಿದೆ. ಆದ್ದರಿಂದ ಹಾಗೆ ಆಗದಂತೆ ನೋಡಿಕೊಳ್ಳಬೇಕು ಎಂದರು.
ಹಣದ ಕೊರತೆ ಇದ್ದರೆ ನನಗೆ ತಿಳಿಸಿ, ನಾನು ಬಿಡುಗಡೆ ಮಾಡಿಸುತ್ತೇನೆ. ಆದರೆ ಕುಡಿಯುವ ನೀರಿಗೆ ತೊಂದರೆ ಆಗಬಾರದು ಎಂದರು .
ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸದೆ ತಮ್ಮ ಕರ್ತವ್ಯವವನ್ನು ಸರಿಯಾಗಿ ಮಾಡಿ. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ನೀವು ಬೇರೆಡೆಗೆ ವರ್ಗಾಯಿಸಿಕೊಂಡು ಹೋಗಬಹುದು. ಆದರೆ ಕ್ರಮದಿಂದ ತಪ್ಪಿಸಿಕೊಳ್ಳಲು ಆಗದು ಎಂಬುದನ್ನು ಮರೆಯಬಾರದು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರು ಕಳಪೆ ಬಿತ್ತನ ಬೀಜ ಮತ್ತು ಗೊಬ್ಬರ ಪೂರೈಕೆ ಆಗದಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ದೂರು ಕೇಳಿ ಬಂದರೆ ಸುಮ್ಮನಿರುವುದಿಲ್ಲ. ಪೂರ್ವ ಮುಂಗಾರಿನಿಂದ ಆದ ಬೆಳೆಹಾನಿಗೆ ಕೂಡಲೇ ಪರಿಹಾರ ನೀಡಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಮಾಲೀಕರು ಅವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.
ಮಹಿಳೆಯರಿಗೆ ಉಚಿತ ಬಸ್‌ಗೆ ಏನೆಲ್ಲ ಸಿದ್ಧತೆ ಆಗಿದೆ?
ಜೂ. ೧೧ ರಿಂದ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಿಸುತ್ತಿದ್ದು, ಅದಕ್ಕೆ ಏನೆಲ್ಲ ಸಿದ್ಧತೆ ಮಾಡಿಕೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ಬಗ್ಗೆ ಉತ್ತರಿಸಿದ ಕೆಎಸ್‌ಆರ್‌ಟಿಸಿ ಡಿಸಿ, ಗ್ರಾಮಾಂತರ ಬಸ್ ನಿಲ್ದಾಣದ ಟಿಕೆಟ್ ಬುಕ್ಕಿಂಗ್ ಕೌಂಟರ್ ಬಳಿ ವೇದಿಕೆ ನಿರ್ಮಿಸಲಾಗಿದೆ.
ಮಹಿಳೆಯರಿಗೆ ಸಿಹಿ ಮತ್ತು ಗುಲಾಬಿ ಹೂ ನೀಡಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾಾನಿಸಿದ್ದೇವೆ ಎಂದರು.
ಜಿಲ್ಲಾಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು, ವಾಡಿಕೆ ಮಳೆ ಮತ್ತು ಹಾಲಿ ಮಳೆ ಬಿದ್ದ ಕುರಿತು ಮಾಹಿತಿ ನೀಡಿದರು. ಕಬಿನಿಯಿಂದ ರೈತರ ಕಬ್ಬಿಿಗೆ ಅಗತ್ಯವಿರುವ ನೀರನ್ನು ನೀಡಿ. ಆದರೆ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಚಿವ ಕೆ. ವೆಂಕಟೇಶ್, ಶಾಸಕರಾದ ತನ್ವೀರ್‌ಸೇಠ್, ಜಿ.ಟಿ. ದೇವೇಗೌಡ, ಜಿ.ಡಿ. ಹರೀಶ್‌ಗೌಡ, ಟಿ.ಎಸ್. ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು, ಡಿ. ರವಿಶಂಕರ್, ಕೆ. ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಮೇಯರ್ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.