ಬೆಂಗಳೂರು: ೩೭೩ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ೨೦೨೪-೨೫ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ ೧,೪೧೯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಅನುಮತಿ ನೀಡಲಾಗಿತ್ತು. ಬೇಡಿಕೆ ಪರಿಗಣಿಸಿ ಕನಿಷ್ಠ ೧೦೦ ವಿದ್ಯಾರ್ಥಿಗಳಿರುವ ೩೭೩ ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಶಾಲೆಗಳಿಗೆ ಅನುಮತಿ ನೀಡಲಾಗಿದೆ.