ಚಿತ್ರದುರ್ಗ: ಕಲಿಕೆಗೆ ನಮ್ಮ ವೈಯಕ್ತಿಕ ಸಮಸ್ಯೆಗಳು ಎಂದಿಗೂ ಅಡ್ಡಿಯಾಗಬಾರದು ಎಂದು ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ಹೇಳಿದರು. ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕ್ರೀಡಾ, ಸಾಂಸ್ಕøತಿಕ, ರೋವರ್ಸ್, ಹಾಗೂ ಎನ್.ಎಸ್.ಎಸ್. ಘಟಕಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೇವಲ ನಾವು ಉದ್ಯೋಗಕ್ಕಾಗಿ ಮಾತ್ರ ಶಿಕ್ಷಣ ಪಡೆಯುವುದಲ್ಲ. ಉದ್ಯೋಗ ಪಡೆಯುವಂತಹದ್ದು ಅವರ ನಿಜದ ಪ್ರತಿಭೆ ಮುಖ್ಯವಾಗಿರುತ್ತದೆ. ಬೀದಿದೀಪದ ಕೆಳಗೆ ಓದಿದ ವ್ಯಕ್ತಿಗಳು ಇಂಜಿನಿಯರ್, ಸಂವಿಧಾನ ತಜ್ಞರಾಗಿದ್ದಾರೆ. ವಿಶ್ವಮಟ್ಟದಲ್ಲಿ ಗುರುತಿಸುವ ಮಹಾನ್ ವ್ಯಕ್ತಿಯಾಗಿದ್ದಾರೆ. ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಇದಕ್ಕೆ ಕಾರಣ ಅವರು ಪಡೆದಂತಹ ಶಿಕ್ಷಣ ಎಂದು ತಿಳಿಸಿದ ಅವರು, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪ್ರಸಿದ್ದ ಜನಪ್ರಿಯ ಗಾಯಕರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಡಾ.ಅಪ್ಪಗೆರೆ ತಿಮ್ಮರಾಜು ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ಅಧ್ಯಯನದಲ್ಲಿ ನಿರತರಾಗಬೇಕು. ಯಾವುದೇ ಕಾರಣಕ್ಕೂ ಕಾಲಹರಣ ಮಾಡಬಾರದು. ಶ್ರದ್ಧೆಯಿಂದ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ ಅವರು, ಉಪನ್ಯಾಸಕರು ಉತ್ಸಾಹ ಕಳೆದುಕೊಳ್ಳಬಾರದು. ಉಪನ್ಯಾಸಕರು ಉತ್ಸಾಹದಿಂದ ಪಾಠಪ್ರವಚನಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಚಿತ್ರದುರ್ಗ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಸಾಂಸ್ಕøತಿಕ ಕಾರ್ಯದರ್ಶಿ ಡಾ.ಬಿ.ಎಂ.ಗುರುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶ್ರಾಂತ ಪ್ರಾಧ್ಯಾಪಕ ಸಲಬೊಮ್ಮನಹಳ್ಳಿ ಸಿದ್ದೇಶ್ ಗೌಡ, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಬಿ.ನರಸಿಂಹಮೂರ್ತಿ, ಉಪನ್ಯಾಸಕರಾದ ಬಿ.ಕೃಷ್ಣಪ್ಪ, ಡಿ.ಶ್ರೀನಿವಾಸ್, ಎಸ್.ರಹಮಲ್ ಉಲ್ಲಾ, ಡಿ.ಕಾವ್ಯ, ಎನ್.ದೊಡ್ಡಪ್ಪ, ಎಸ್.ಎನ್.ಹೇಮಂತರಾಜು, ಚಂಪಕಲಾ, ಮುಖ್ಯ ಶಿಕ್ಷಕ ಮಹಮದ್ ಜಕಾಉಲ್ಲಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು