ಮಂಡ್ಯ: ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ವಿನೂತನವಾಗಿ ಪ್ರತಿಭಟನೆ ನಡೆಸಿದೆ.
ಬೈಕ್ ಗೆ ನೇಣು ಕುಣಿಕೆ ಹಾಕಿ ಆತ್ಮಹತ್ಯೆ ಮಾಡಿಕೊಳ್ಳುವ ಹಾಗೇ ಅಣಕು ಪ್ರದರ್ಶನ ಮಾಡುವ ಮೂಲಕ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು, ಮಾನವಸರಪಳಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕಿವಿಯಲ್ಲಿ ಹೂ ಇಟ್ಟುಕೊಂಡು ಅಕಟಾಕಟ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ರೀತಿ ವರ್ತನೆ ಮಾಡ್ತಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಹೊರೆ ಹಾಕಿದ್ದಾರೆ. ಗ್ಯಾರಂಟಿಗಾಗಿ ತೆರೆಗೆ ಹೆಚ್ಚಳ ಮಾಡಿ ಜನರಿಗೆ ಭರೆ ಎಳೆದಿದ್ದಾರೆ. ತಕ್ಷಣವೇ ಪೆಟ್ರೋಲ್-ಡಿಸೇಲ್ ಬೆಲೆ ಕಡಿಮೆ ಬೆಲೆ ಕಡಿಮೆ ಮಾಡುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಸಿದ್ದರಾಮಯ್ಯ, ಸಿಟಿ ಮಂಜುನಾಥ, ಸಿದ್ದರಾಜು, ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.