Friday, April 11, 2025
Google search engine

Homeರಾಜ್ಯಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯಾದ್ಯಂತ ಜೂನ್ 17 ರಂದು ಬಿಜೆಪಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯಾದ್ಯಂತ ಜೂನ್ 17 ರಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಮೊದಲನೆಯದಾಗಿ, ರಾಜ್ಯದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಗ್ಯಾರಂಟಿಗಳ ಕಾರಣದಿಂದಾಗಿ ಅವರು ಸರ್ಕಾರವನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 3 ರೂ. ಮತ್ತು ಡೀಸೆಲ್‌ ಬೆಲೆಯನ್ನು ರೂ. 3.50 ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಂಡಿದೆ. ಇದನ್ನು ಹಿಂಪಡೆಯಬೇಕು ಎಂಬುದು ಬಿಜೆಪಿಯ ಒತ್ತಾಯವಾಗಿದೆ. ಈ ನಿರ್ಧಾರದ ಬಗ್ಗೆ ಪಕ್ಷ ಸುಮ್ಮನಿರುವುದಿಲ್ಲ. ಸೋಮವಾರ ನಾವು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಮತ್ತು ಬೆಲೆ ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಈ ಮೂಲಕ ರಾಜ್ಯ ಜನತೆಯನ್ನು ಶಿಕ್ಷಿಸುತ್ತಿದೆ.

“ರಾಜ್ಯದಲ್ಲಿ ಬರಗಾಲವಿದೆ ಮತ್ತು ಈ ಬಿಕ್ಕಟ್ಟಿನ ಅವಧಿಯಲ್ಲಿ ಇಂಧನ ಬೆಲೆಗಳನ್ನು ಹೆಚ್ಚಿಸುವ ನಿರ್ಧಾರವು ಅಕ್ಷಮ್ಯ ಅಪರಾಧವಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ತಮ್ಮ ಅಹಂಕಾರವನ್ನು ಬದಿಗಿಟ್ಟು ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular