Friday, April 11, 2025
Google search engine

Homeರಾಜಕೀಯಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಪ್ರಲ್ಹಾದ್​ ಜೋಶಿ ಸರ್ಕಾರದ ವಿರುದ್ಧ ಕಿಡಿ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಪ್ರಲ್ಹಾದ್​ ಜೋಶಿ ಸರ್ಕಾರದ ವಿರುದ್ಧ ಕಿಡಿ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಆ ಮೂಲಕ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ಮಾಡಿದೆ. ಸದ್ಯ ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಅಭಿವೃದ್ಧಿ ಕೇಳಬೇಡಿ.. ತೊಗೊಳ್ರಪ್ಪ ಕೊಟ್ರು ಚೊಂಬು.. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರೂ, ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯವನ್ನು ರಾಜ್ಯಕ್ಕೆ ನೀಡಿದ್ದು, ಅಧಿಕಾರ ವಹಿಸಿಕೊಂಡ ಕಳೆದ 1.5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ. ಈಗ ನೇರವಾಗಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.

RELATED ARTICLES
- Advertisment -
Google search engine

Most Popular