ಹೊಸೂರು : ಶಿಕ್ಷಣ ಇಲಾಖೆ ವತಿಯಿಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಪಟ್ಟಣದ ಕೃಷ್ಣರಾಜ ಕ್ರೀಡಾಂಗಣದಲ್ಲಿ ಮಾರಗೌಡನಹಳ್ಳಿ ಪ್ರೌಢಶಾಲೆಯ ಪ್ರಯೋಜಕತ್ವದಲ್ಲಿ ನಡೆಸಲಾಯಿತು. ಶಾಸಕ ಡಿ.ರವಿಶಂಕರ್ ಕ್ರೀಡಾ ಧ್ವಜಾರೋಹಣ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ ಮಟ್ಟದ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು ಈ ವಿಚಾರವನ್ನು ದೈಹಿಕ ಶಿಕ್ಷಕರು ಗಂಬೀರವಾಗಿ ಪರಿಗಣಿಸಿ ಉತ್ತಮ ತರಬೇತಿ ನೀಡಬೇಕು ಎಂದು ತಾಕೀತು ಮಾಡಿದರು.
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡಾಗ ದೇಹ ಸದೃಡಗೊಳ್ಳುವುದರ ಜತೆಗೆ ಆರೋಗ್ಯವಂತರಾಗಿ ಇರಲು ಸಾಧ್ಯ ಇದನ್ನು ಅರಿತು ಓದಿನಷ್ಟೆ ಕ್ರೀಡೆಗೂ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದ ಶಾಸಕ ಡಿ.ರವಿಶಂಕರ್ ಕ್ರೀಡೆಯಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ವೈಯುಕ್ತಿಕವಾಗಿ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಆಗ ವಿದ್ಯಾರ್ಥಿಗಳು ಸಾಧನೆ ಮಾಡಲಿದ್ದಾರೆ ಇದರಿಂದ ಕ್ಷೇತ್ರಕ್ಕೆ ಮತ್ತು ನಿಮ್ಮಗಳಿಗೂ ಗೌರವ ದೊರೆಯಲಿದೆ ಎಂದರಲ್ಲದೆ ನನ್ನ ಅಧಿಕಾರವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಲು ನಿರ್ಧರಿಸಿದ್ದು ಇದಕ್ಕೆ ಶಿಕ್ಷಣ ಇಲಾಖೆ ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಪಿಎಸ್‌ಐ ಧನರಾಜು, ಬಿಇಒ ಆರ್.ಕೃಷ್ಣಪ್ಪ, ದೈಹಿಕ ಪರಿವೀಕ್ಷಕ ಎಂ.ಪಿ.ಕುಮಾರಸ್ವಾಮಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಧುಕುಮಾರ್, ನಾಗರಾಜು, ಸಿಆರ್‌ಪಿ ವಸಂತ್‌ಕುಮಾರ್, ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಜಗದೀಶ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಸೈಯದ್‌ರಿಜ್ವಾನ್, ಕೆ.ಪಿ.ಭಾರತಿ, ಕುಮಾರ್, ಮಧುಸೂದನ್, ಮಹೇಂದ್ರ, ಪ್ರಸಾದ್ ಮತ್ತಿತರರು ಹಾಜರಿದ್ದರು.