Friday, April 18, 2025
Google search engine

Homeರಾಜ್ಯಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನ ಪಲ್ಟಿ: 14 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನ ಪಲ್ಟಿ: 14 ಮಂದಿ ಸಾವು

ಮಧ್ಯಪ್ರದೇಶ: ಚಾಲಕನ ನಿಯಂತ್ರಣ ತಪ್ಪಿದ ಪಿಕ್ ಅಪ್ ವಾಹನ ಪಲ್ಟಿಯಾದ ಪರಿಣಾಮ ಹದಿನಾಲ್ಕು ಮಂದಿ ಮೃತಪಟ್ಟು ಇಪ್ಪತ್ತೊಂದು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಿಂಡೋರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ದಿಂಡೋರಿ ಜಿಲ್ಲೆಯ ಬಡ್ಜರ್ ಗ್ರಾಮದ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಗ್ರಾಮಸ್ಥರು ದೇವಾರಿ ಗ್ರಾಮಕ್ಕೆ ಹಿಂತಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಸ್ಥಳೀಯರು ಮತ್ತು ಪೊಲೀಸರು ಸೇರಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ.

4 ಲಕ್ಷ ಪರಿಹಾರ ಘೋಷಣೆ

ಘಟನೆಯಲ್ಲಿ ಮೃತಪಟ್ಟವರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಮೃತರ ಕುಟುಂಬಗಳಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸ್ಥಳೀಯ ಆಡಳಿತಕ್ಕೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

RELATED ARTICLES
- Advertisment -
Google search engine

Most Popular