ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಸಮೀಪದ ಹರಳಹಳ್ಳಿ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ದೇವರ ಆರಾಧನಾ ಮಹೋತ್ಸವ ಸಾಂಪ್ರದಾಯಿಕವಾಗಿ ಜರುಗಿತು.
ಗ್ರಾಮದ ಹೊರವಲಯದಲ್ಲಿರುವ ದೇವಾಲಯದಲ್ಲಿ ಅರ್ಚಕರಾದ ಲೋಕೇಶ್ ಆರಾಧ್ಯ ನೇತೃತ್ವದಲ್ಲಿ ಹಲವು ಧಾರ್ಮಿಕ ಪೂಜೆಗಳು ಜರುಗಿ ಬಳಿಕ ಮಹಾ ಮಂಗಳಾರತಿ ನಡೆಸಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಗ್ರಾಮಸ್ಥರಿಂದ ಅನ್ನಸಂತರ್ಪಣೆಗಾಗಿ ದವಸಧಾನ್ಯ ಸಂಗ್ರಹಿಸಿ ದೇವಾಲಯ ಬಳಿ ಪ್ರಸಾದ ತಯಾರಿಸಿ ಭಕ್ತಾದಿಗಳಿಗೆ ವಿತರಿಸುವುದು ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ, ಹರಳಹಳ್ಳಿ ಸೇರಿದಂತೆ ಸುತ್ತಮುತ್ತಲ ನೂರಾರು ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
