ವರದಿ: ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ ಎಂದು ಪಿರಿಯಾಪಟ್ಟಣ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಕೆ ಕುಮಾರ್ ತಿಳಿಸಿದರು.
ಪಟ್ಟಣದ ಒಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ನಾವು ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ನಮಗೆ ಮಾರ್ಗದರ್ಶನ ತೋರುವ ಗುರುಗಳ ಪಾತ್ರ ಅಪಾರವಾಗಿದೆ ಗುರು ಹಿರಿಯರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಾಗಿದಾಗ ಯಶಸ್ಸಿನ ಗುರಿ ತಲುಪಬಹುದು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ಮಹದೇವಮ್ಮ, ಜಯಲಕ್ಷ್ಮಿ ಹಾಗೂ ಗಿರೀಶ್ ಅವರು ತಾಲೂಕಿನ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿರುವುದು ಸಂತಸದ ಸಂಗತಿ ಎಂದರು.
ಸನ್ಮಾನ ಸ್ವೀಕರಿಸಿದ ಮಹದೇವಮ್ಮ, ಜಯಲಕ್ಷ್ಮಿ ಹಾಗು ಗಿರೀಶ್ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಕರ ಅನ್ನದಾತರು ಆದ್ದರಿಂದ ಶಿಕ್ಷಕರು ಮಕ್ಕಳಿಗೆ ವಂಚನೆ ಮಾಡಬಾರದು ಈ ಪ್ರಶಸ್ತಿಗಳು ಕೇವಲ ನಮಗಷ್ಟೇ ಸೀಮಿತವಲ್ಲ ಇದು ಎಲ್ಲ ಶಿಕ್ಷಕರಿಗೂ ಸಂದ ಗೌರವವಾಗಿದೆ, ಪ್ರಶಸ್ತಿ ಶಿಕ್ಷಕರ ಜವಾಬ್ದಾರಿ ಹೆಚ್ಚಿಸುತ್ತದೆ ಹಾಗೂ ಉಳಿದ ಶಿಕ್ಷಕರಿಗೆ ಇದು ಸ್ಫೂರ್ತಿ ಮತ್ತು ಮಾದರಿಯಾಗಿರುತ್ತದೆ, ಪ್ರತಿಯೊಬ್ಬ ಶಿಕ್ಷಕನೂ ಸಹ ಸಮಾಜದ ಹಿತದೃಷ್ಠಿಯಿಂದ ಶಿಕ್ಷಣವನ್ನು ಸವಾಲಾಗಿ ಸ್ವೀಕರಿಸಿ ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿಯನ್ನು ಹೆಚ್ಚಿಸಲು ಶ್ರಮಿಸಬೇಕು ಎಂದರು.
ಈ ಸಂದರ್ಭ ಒಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಬಸವರಾಜು ರವರನ್ನು ಸನ್ಮಾನಿಸಲಾಯಿತು, ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಮಂಜುನಾಥ್ ಸಿಂಗ್, ಕಾರ್ಯದರ್ಶಿ ಗಿರೀಶ್, ಖಜಾಂಚಿ ಲವಕುಮಾರ್ ಸದಸ್ಯರಾದ ಹುಣಸೆಕುಪ್ಪೆ ಸ್ವಾಮಿ, ಆನಂದ್, ನಿವೃತ್ತ ಸಂಚಾರಿ ನಿಯಂತ್ರಣಾಧಿಕಾರಿ ಪಾಪಣ್ಣನಾಯ್ಕ, ಶಿಕ್ಷಕರಾದ ಎಸ್.ಆರ್ ರಮೇಶ್, ಅಶೋಕ್, ಎಂ.ನಟರಾಜ್, ಮೇರಿ ಸ್ಟೆರ್ಲಾ, ವಿಂಧ್ಯಾ, ಪ್ರಗತಿ ಪರ ರೈತ ಚಂದ್ರಶೇಖರ್ ಹಾಗು ಶಾಲಾ ವಿದ್ಯಾರ್ಥಿಗಳು ಇದ್ದರು.