ಪಿರಿಯಾಪಟ್ಟಣ: ಮಕ್ಕಳಲ್ಲಿನ ಪಠ್ಯೇತರ ಚಟುವಟಿಕೆ ಹೊರ ತರಲು ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಟಿ.ವಿ ಶೈಲಾ ಅಭಿಪ್ರಾಯಪಟ್ಟರು.
ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಕ್ಲಸ್ಟರ್ ಕೇಂದ್ರ ವತಿಯಿಂದ ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಭಾಗವಹಿಸಿ ಅವರು ಮಾತನಾಡಿದರು, ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಯಶಸ್ಸಿನ ಗುರಿ ತಲುಪಲು ಸಹಕಾರಿಯಾಗುತ್ತದೆ ಎಂದರು.
ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಖಜಾಂಚಿ ಪ್ರಕಾಶ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಇರುತ್ತದೆ ಅದನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿದಾಗ ಪ್ರತಿಭೆ ಹೊರತರಲು ಸಾಧ್ಯವಾಗುತ್ತದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಸಹ ಕಾರ್ಯದರ್ಶಿ ಎಸ್.ಕೆ ಸೌಭಾಗ್ಯ ಅವರು ಮಾತನಾಡಿ ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಹಜ ಮಕ್ಕಳು ಸ್ಪರ್ಧಾ ಮನೋಭಾವದಿಂದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸೀಮಾ ಅವರು ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಹಾಗೂ ಸಂಸ್ಕೃತಿ ಕಲಿಸಿಕೊಡುವ ಜತೆಗೆ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ದೊರಕಿಸಿಕೊಟ್ಟಾಗ ತಾಲೂಕು ಜಿಲ್ಲೆ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯ ಗುರಿ ತಲುಪಲು ಸಹಕಾರಿಯಾಗುತ್ತದೆ ಎಂದರು.
ವಿದ್ಯಾರ್ಥಿಗಳು ಛದ್ಮವೇಷ, ಚಿತ್ರಕಲೆ, ಕ್ಲೇ ಮಾಡೆಲ್ಲಿಂಗ್, ಜಾನಪದ ಗೀತೆ, ಕವನ ವಾಚನ, ಜಾನಪದ ನೃತ್ಯ, ರಸಪ್ರಶ್ನೆ, ಭಾಷಣ, ಚರ್ಚಾ ಸ್ಪರ್ಧೆ ಸೇರಿದಂತೆ ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಹುಮ್ಮಸ್ಸಿನಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್ ಉಮಾದೇವಿ, ಶಾಂತಿನಿಕೇತನ ಶಾಲೆಯ ಮುಖ್ಯ ಶಿಕ್ಷಕಿ ಮೇರಿ ಫಾತಿಮ, ಹಿರಿಯ ಶಿಕ್ಷಕಿಯರಾದ ಕವಿತಾ, ಮಮತ ಹಾಗೂ ಸುಂಟಿಕೊಪ್ಪ ಕ್ಲಸ್ಟರ್ ವ್ಯಾಪ್ತಿಯ 22 ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.