ಪಿರಿಯಾಪಟ್ಟಣ: ಬಿಜೆಪಿ ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾ ರೈತ ಮೋರ್ಚ ಕಾರ್ಯದರ್ಶಿಯಾಗಿ ಕಿರಂಗೂರು ಮೋಹನ್ ಆಯ್ಕೆಯಾಗಿದ್ದಾರೆ.
ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ಎಲ್.ಆರ್ ಮಹದೇವಸ್ವಾಮಿ ಅವರ ಸೂಚನೆ ಮೇರೆಗೆ ಜಿಲ್ಲಾ ರೈತ ಮೋರ್ಚ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ಕಿರಗೂರು ಮೋಹನ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ತಾಲೂಕು ಅಧ್ಯಕ್ಷ ಕೊಪ್ಪ ರಾಜೇಂದ್ರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ ಸೇರಿದಂತೆ ಬಿಜೆಪಿ ತಾಲೂಕು ಘಟಕ ಪದಾಧಿಕಾರಿಗಳು ನೂತನ ಕಾರ್ಯದರ್ಶಿ ಅವರನ್ನು ಅಭಿನಂದಿಸಿ ಶುಭ ಕೋರಿದರು.