Wednesday, April 9, 2025
Google search engine

Homeರಾಜ್ಯಸುದ್ದಿಜಾಲಪಿರಿಯಾಪಟ್ಟಣ: ಫೆಬ್ರವರಿ 20 ರಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ಪಿರಿಯಾಪಟ್ಟಣ: ಫೆಬ್ರವರಿ 20 ರಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಕಡಿತ

ವರದಿ: ಬೆಕ್ಕರೆ ಸತೀಶ್ ಆರಾಧ್ಯ

ಪಿರಿಯಾಪಟ್ಟಣ: ಫೆ.20 ರಂದು ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಪಿರಿಯಾಪಟ್ಟಣ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಗುರು ಬಸವರಾಜಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಗುರು ಬಸವರಾಜಸ್ವಾಮಿಯವರು ಪತ್ರಿಕಾ ಹೇಳಿಕೆ ನೀಡಿದ್ದು ಬೈಲಕುಪ್ಪೆ ಮತ್ತು ಪಿರಿಯಾಪಟ್ಟಣ 66/11 KV ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಪಿರಿಯಾಪಟ್ಟಣ ಟೌನ್, ಮುತ್ತೂರು, ಚೌತಿ, ಮಾಲಂಗಿ, ಪಂಚವಳ್ಳಿ, ಬೈಲುಕುಪ್ಪೆ, ಕಿರನಹಳ್ಳಿ,  ಚಿಟ್ಟೆನಹಳ್ಳಿ , ಕೊಪ್ಪ  ನವಿಲೂರು, ಚನ್ನಕಲ್ ಕಾವಲು, ಆವರ್ತಿ, ಪುನಾಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular