Saturday, April 19, 2025
Google search engine

Homeಸ್ಥಳೀಯವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕ ಬಿಡುಗಡೆ

ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕ ಬಿಡುಗಡೆ

ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹೊರತಂದಿರುವ ವಾರ್ಷಿಕ ಕಾರ್ಯಕ್ರಮಗಳ ಯೋಜನಾ ಪುಸ್ತಕವನ್ನು ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮಟ್ಟದ ಅಧ್ಯಕ್ಷ ವೆಂಕಟ್ ರಾಜ ಶುಕ್ರವಾರ ಬಿಡುಗಡೆ ಮಾಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಿಡುಗಡೆ ಮಾಡಿ ಜಿಲ್ಲಾ ಮಟ್ಟದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಕ್ಕಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸ್ವಚ್ಛತೆ, ಪರಿಸರದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಂಗಧಾಮಯ್ಯ, ಪದ್ಮಶ್ರೀ ಪುರಸ್ಕೃತ ಹಾಗೂ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸ್ಥಳೀಯ ಆಯುಕ್ತ ಎಚ್.ಆರ್.ಮುತ್ತಪ್ಪ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಅಜ್ಜಮಕ್ಕಡ ವಿನುಕುಮಾರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕ ಯು.ಸಿ.ದಮಯಂತಿ, ಸ್ಕೌಟರ್ ಕುಟ್ಟಪ್ಪ ಇತರರು ಇದ್ದರು.

RELATED ARTICLES
- Advertisment -
Google search engine

Most Popular