ನವದೆಹಲಿ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಒಂಬತ್ತು ಮಂದಿ ಇತರರು ಇಂದು ಮಂಗಳವಾರ ವಿಮಾನ ದುರಂತವೊಂದರಲ್ಲಿ ಮೃತಪಟ್ಟಿದ್ದಾರೆಂದು ದೇಶದ ಅಧ್ಯಕ್ಷರ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.
ಮಲಾವಿ ರಾಷ್ಟ್ರದ ಉಪಾಧ್ಯಕ್ಷ ಸೇರಿದಂತೆ ೧೦ ಮಂದಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸೌಲೋಸ್ ಮತ್ತಿತರರು ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆಯಾಗಿತ್ತೆಂದು ಈ ಹಿಂದೆ ವರದಿಯಾಗಿತ್ತು. ವ್ಯಾಪಕ ಶೋಧ ಕಾರ್ಯಾಚರಣೆಯ ನಂತರ ವಿಮಾನವು ಚಕಿಂಗವ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ವಿಮಾನ ದುರಂತದಲ್ಲಿ ಯಾರೊಬ್ಬರು ಬದುಕಿರುವ ಸಾಧ್ಯತೆಗಳಿಲ್ಲ ಎಂದು ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ವಿಮಾನ ದೇಶದ ಉತ್ತರದಲ್ಲಿರುವ ದಟ್ಟಕಾಡುಗಳ ಪರ್ವತ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಶಂಕಿಸಲಾಗಿದೆ.