ಬೆಂಗಳೂರು: ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದ ಪತನಗೊಂಡ ದುರ್ಘಟನೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ, ಈ ದುರ್ಘಟನೆಯ ಸುದ್ದಿ ತಿಳಿದು ಬೇಸರವಾಗಿದೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎನ್ನಲಾಗಿದ್ದು, “ಈ ದುರ್ಘಟನೆಯಲ್ಲಿ 110 ಪ್ರಯಾಣಿಕರು ಸಾವಿಗೀಡಾಗಿದ್ದು, ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ,” ಎಂದು ನಿಖಿಲ್ ತಿಳಿಸಿದ್ದಾರೆ.
ಟೇಕಾಫ್ ಆದ ಬಳಿಕ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣದಿಂದಾಗಿ ವಿಮಾನವು ಕೇವಲ 2 ಕಿ.ಮೀ ದೂರದ ಮೇಘಾನಿ ಪ್ರದೇಶದಲ್ಲಿ ಪತನಗೊಂಡಿದೆ. ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಿಮಾನ ಕೆಲ ಕಟ್ಟಡಗಳ ಮೇಲೆ ಬಿದ್ದಿದೆ. ಘಟನೆಯಲ್ಲಿ 110 ಮಂದಿ ಸಾವನ್ನಪ್ಪಿದ್ದು, 132 ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳದಲ್ಲಿ 7 ಅಗ್ನಿಶಾಮಕ ಹಾಗೂ ಎನ್‌ಡಿಆರ್‌ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.