Sunday, April 20, 2025
Google search engine

Homeರಾಜ್ಯಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿಗೆ ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್ ವಸ್ತುಗಳನ್ನು ಒಯ್ಯುವಂತಿಲ್ಲ.ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ಸಂಪೂರ್ಣ ನಿಷೇಧಿಸಿದೆ.

ಪ್ಲಾಸ್ಟಿಕ್ ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಒಂದು ವೇಳೆ ಪ್ಲಾಸ್ಟಿಕ್ ವಸ್ತುಗಳು ಸಿಕ್ಕರೆ ಸೀಜ್ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ, ಪ್ರವಾಸಿತಾಣಗಳನ್ನ ರಕ್ಷಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ಕ್ರಮವನ್ನು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular