Tuesday, April 22, 2025
Google search engine

Homeಸ್ಥಳೀಯಪಿಎಂ  ಜನ್ಮನ್ ಯೋಜನೆ : ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ಅಗತ್ಯ ಕ್ರಮ ವಹಿಸಬೇಕು- ಡಾ ಕೆ.ವಿ.ರಾಜೇಂದ್ರ

ಪಿಎಂ  ಜನ್ಮನ್ ಯೋಜನೆ : ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ಅಗತ್ಯ ಕ್ರಮ ವಹಿಸಬೇಕು- ಡಾ ಕೆ.ವಿ.ರಾಜೇಂದ್ರ

ಮೈಸೂರು: ಪಿಎಂ ಜನ್ಮನ್  ಯೋಜನೆಯು  ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಗುರಿ ಹೊಂದಿರುವ ಸರ್ಕಾರದ ಯೋಜನೆಯಾಗಿದ್ದು ಈ ನಿಟ್ಟಿನಲ್ಲಿ ನೇಮಕವಾಗಿರುವ ನೋಡೆಲ್ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳು  ಅಧ್ಯಕ್ಷತೆಯಲ್ಲಿ  PM JANMAN ಯೋಜನೆಯ ಅನುಷ್ಠಾನಕ್ಕೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.

ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರಿನ ಪ್ರವೇಶ , ಸುಧಾರಿತ ಆರೋಗ್ಯ, ಶಿಕ್ಷಣ, ಪೋಷಣೆ, ರಸ್ತೆ ಮತ್ತು ದೂರಸಂಪರ್ಕ ಸಂಪರ್ಕ, ಜೊತೆಗೆ ಸುಸ್ಥಿರ ಜೀವನೋಪಾಯಕ್ಕಾಗಿ ಅವಕಾಶಗಳನ್ನು ಒಳಗೊಂಡಂತೆ  ಈ ಸೌಲಭ್ಯಗಳು ಬುಡಕಟ್ಟು ಸಮುದಾಯದ ಅರ್ಹ ಫಲಾನುಭವಿಗಳಿಗೆ ಸಿಗುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ 153 ಹಾಡಿಗಳಲ್ಲಿ ಬುಡಕಟ್ಟು ಸಮುದಾಯದ ಜನರು ಇರುತ್ತಾರೆ. ಜೇನು ಕುರುಬ ಸಮುದಾಯದವರು ಈಗಲೂ  ಕಚ್ಚಾ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ.   ಅವರಿಗೆ ಪಕ್ಕಾ ಮನೆ ನಿರ್ಮಾಣ ಮಾಡಿ ನೀಡಬೇಕು ಹಾಗೂ ಸೌಲಭ್ಯ ವಂಚಿತ ಬುಡಕಟ್ಟು ಸಮುದಾಯದ ಅರ್ಹ ಫಲಾನುಭವಿಗಳಿಗೆ ಗುರುತಿಸಿ ನೀಡಬೇಕು. 15 ವರ್ಷ ಹಳೆಯ ಮನೆಗಳು ಇದ್ದರೂ ಅಂತಹವರನ್ನು ಗುರುತಿಸಿ ಸೌಲಭ್ಯಗಳನ್ನು ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದರು.

ತಾಲ್ಲೂಕಿನ ತಹಶೀಲ್ದಾರ್ ಅವರು ಈ ಯೋಜನೆಯಡಿ ಸೌಲಭ್ಯಗಳನ್ನು  ನೀಡಲು ಎರಡು ಗಂಟೆ ಪ್ರತಿದಿನ  ಕೆಲಸ ನಿರ್ವಹಿಸಬೇಕು. ಯಾವುದೇ ಹಾಡಿಗಳಲ್ಲಿ ಮೂಲ ಭೂತ ಸೌಕರ್ಯ ಕೊರತೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.

ಹಾಡಿಗಳಲ್ಲಿ ಅಧಿಕಾರಿಗಳು ಸಭೆ ನಡೆಸಿ ಸೂರು ಇಲ್ಲದವರಿಗೆ, ಕುಡಿಯುವ ನೀರು, ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣ, ಆಧಾರ್ ನೋಂದಣಿ, ಜಾತಿ ಹಾಗೂ ಜನನ ಪ್ರಮಾಣ ಪತ್ರ ಮಾಡಿಸುವುದು, ಎಪಿಕ್ ಕಾರ್ಡ್  ಮಾಡಿಸುವ ಬಗ್ಗೆ ನೋಡೆಲ್ ಅಧಿಕಾರಿಗಳು ಗಮನಹರಿಸಬೇಕು ಎಂದು ಅವರು ತಿಳಿಸಿದರು.

ಹೆಚ್.ಡಿ.ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕುಗಳ ಹಾಡಿಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಡಿಗಳಿಗೆ ಭೇಟಿ ನೀಡಿ ಅಲ್ಲಿ ಅವರಿಗೆ ಸರ್ಕಾರದ ಸೌಕರ್ಯಗಳನ್ನು ನೀಡುವುದು. ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು, ಆರೋಗ್ಯ ರಕ್ಷಣೆಗೆ ಸುಧಾರಿತ ಪ್ರವೇಶ, ಶಿಕ್ಷಣ, ಮತ್ತು ಪೋಷಣೆ,  ರಸ್ತೆ ಮತ್ತು ದೂರಸಂಪರ್ಕ ಸಂಪರ್ಕ, ಮತ್ತು ಸುಸ್ಥಿರ ಜೀವನೋಪಾಯಕ್ಕಾಗಿ ಅವಕಾಶಗಳ ಬಗ್ಗೆ ಅಧಿಕಾರಿಗಳು ಇಂದೇ ಸ್ಧಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೆಲಸ ಮಾಡಲು ಮುಂದಾಗಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್, ಹುಣಸೂರು ಉಪ ವಿಭಾಗಾಧಿಕಾರಿ ಹ್ಯಾರಿಸ್ ಸುಮೈರ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಎನ್. ಮುನಿರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular