ಭಾಗಲ್ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 19ನೇ ಕಂತನ್ನು 2025ರ ಫೆಬ್ರವರಿ 24 ರಂದು ಬಿಹಾರದ ಭಾಗಲ್ಪುರದಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ದೇಶಾದ್ಯಂತ 2.41 ಕೋಟಿ ಮಹಿಳಾ ರೈತರು ಸೇರಿದಂತೆ 9.8 ಕೋಟಿ ರೈತರು 19 ನೇ ಕಂತಿನ ಬಿಡುಗಡೆಯ ಮೂಲಕ ಪ್ರಯೋಜನ ಪಡೆಯಲಿದ್ದಾರೆ, ಯಾವುದೇ ಮಧ್ಯವರ್ತಿಗಳ ಪಾಲ್ಗೊಳ್ಳುವಿಕೆಯಿಲ್ಲದೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ 22,000 ಕೋಟಿ ರೂ.ಗಿಂತ ಹೆಚ್ಚಿನ ನೇರ ಹಣಕಾಸು ನೆರವು ಪಡೆಯಲಿದ್ದಾರೆ.
ಅಂದ್ಹಾಗೆ, ಫೆಬ್ರವರಿ 24, 2019 ರಂದು ಪ್ರಾರಂಭಿಸಲಾದ ಈ ಯೋಜನೆಯು ಅರ್ಹ ಕೃಷಿ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಸಹಾಯವನ್ನ ಒದಗಿಸುತ್ತದೆ. ಇಲ್ಲಿಯವರೆಗೆ, 18 ಕಂತುಗಳಲ್ಲಿ 11 ಕೋಟಿಗೂ ಹೆಚ್ಚು ರೈತರಿಗೆ 3.46 ಲಕ್ಷ ಕೋಟಿ ರೂ.ಗಳನ್ನ ವರ್ಗಾಯಿಸಲಾಗಿದೆ.
ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ನಿಮಗೆ 19ನೇ ಕಂತಿನ ಹಣ ಸಿಗುತ್ತದೆಯೇ ಅಥವಾ ಇಲ್ಲವೇ, ಅದರ ಸ್ಥಿತಿಯನ್ನ ನೀವು ಹೇಗೆ ಪರಿಶೀಲಿಸಬಹುದು ಮತ್ತು ಯಾವ ರೈತರು ಈ ಪ್ರಯೋಜನವನ್ನ ಪಡೆಯುವುದಿಲ್ಲ ಎಂಬುದನ್ನ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಬನ್ನಿ, ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ಅಂಶಗಳ ಬಗ್ಗೆ ತಿಳಿಯೋಣಾ.
ಪಿಎಂ ಕಿಸಾನ್ 19 ನೇ ಕಂತಿನ ಹಣವನ್ನು ಯಾರು ಪಡೆಯುತ್ತಾರೆ?
ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, 19ನೇ ಕಂತಿನ ಹಣ ನಿಮ್ಮ ಖಾತೆಗೆ ಬರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನ ಪರಿಶೀಲಿಸುವುದು ನಿಮಗೆ ಮುಖ್ಯವಾಗಿದೆ. ಈ ಯೋಜನೆಯ ಲಾಭ ಯಾರಿಗೆ ಸಿಗುತ್ತದೆ.?
* 2 ಹೆಕ್ಟೇರ್‌ವರೆಗೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಈ ಯೋಜನೆಯ ಲಾಭ ದೊರೆಯಲಿದೆ.
ರೈತ ಕುಟುಂಬದಲ್ಲಿ ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳು ಇರುತ್ತಾರೆ.
* ಈ ಯೋಜನೆಯ ಹಣವನ್ನು eKYC ಪೂರ್ಣಗೊಳಿಸಿದ ರೈತರಿಗೆ ಮಾತ್ರ ನೀಡಲಾಗುತ್ತದೆ.
* ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಅರ್ಹ ಫಲಾನುಭವಿಗಳನ್ನ ಗುರುತಿಸುತ್ತವೆ.
ಯಾರು ಅರ್ಹರಲ್ಲ.?
* ಸರ್ಕಾರಿ ಉದ್ಯೋಗಗಳನ್ನು ಹೊಂದಿರುವ ಅಥವಾ ಪಿಂಚಣಿ ಪಡೆಯುತ್ತಿರುವ ರೈತರು (ತಿಂಗಳಿಗೆ ₹10,000 ಕ್ಕಿಂತ ಹೆಚ್ಚಿನ ಪಿಂಚಣಿ).
* ಹಾಲಿ ಅಥವಾ ಮಾಜಿ ಸಂಸದರು, ಶಾಸಕರು, ಸಚಿವರು, ಮೇಯರ್’ಗಳು.
* ವೈದ್ಯರು, ಎಂಜಿನಿಯರ್‌ಗಳು, ವಕೀಲರು, ಚಾರ್ಟರ್ಡ್ ಅಕೌಂಟೆಂಟ್‌ಗಳಂತಹ ವೃತ್ತಿಪರರು.
* ವಾಣಿಜ್ಯ ಭೂಮಿ ಅಥವಾ ಸಾಂಸ್ಥಿಕ ಭೂಮಿ ಯಾರ ಹೆಸರಿನಲ್ಲಿದೆಯೋ ಅವರು.
* ಹಿಂದಿನ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿದ ರೈತರು.
* ನೀವು ಈ ಯಾವುದೇ ವರ್ಗಗಳಿಗೆ ಸೇರಿದವರಾಗಿದ್ದರೆ, ನಿಮಗೆ 19ನೇ ಕಂತಿನ ಪ್ರಯೋಜನ ಸಿಗುವುದಿಲ್ಲ.