ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಭುಕುಸಿತದಿಂದಾಗಿ 400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು ಅಪಾರ ಪ್ರಮಾಣದ ಆಸ್ತಿ ನಷ್ಟ ಉಂಟಾಗಿದೆ. ಈ ನಡುವೆ ಇಂದು ಪ್ರಧಾನಿ ನರೇಂದ್ರ ಮೋದಿ ಭೂಕುಸಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
ಕೇರಳಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಭೂಕುಸಿತ ಪೀಡಿತ ವಯನಾಡ್ ಜಿಲ್ಲೆಯಲ್ಲಿ ವಿಶೇಷ ಹೆಲಿಕಾಪ್ಟರ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಬೆಳಿಗ್ಗೆ ಏರ್ ಇಂಡಿಯಾ ಒನ್ ನಲ್ಲಿ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ, ನಂತರ ರಾಜ್ಯಪಾಲರು, ಮುಖ್ಯಮಂತ್ರಿಗಳ ಜೊತೆ ವಯನಾಡ್ ಗೆ ತೆರಳಿದರು.
ಭೂಕುಸಿತ ಪ್ರದೇಶಗಳಾದ ಚೂರಲ್ ಮಲಾ, ಮೆಪ್ಪಾಡಿ ಮುಂಡಕೈನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದು ಕೇರಳ ಸಿಎಂ ಪಿಣರಾಯಿ ವಿಜಯನ್ ಸಾಥ್ ನೀಡಿದರು.