ನವದೆಹಲಿ: ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ.
ಬೆಳಗ್ಗೆ 11 ಗಂಟೆಗೆ ಸಂಸತ್ ನಲ್ಲಿ ಮೋದಿ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಇದಾಗಿದೆ.
ನಾಳೆ ಸಂಸತ್ ಭವನದಲ್ಲಿ ಮೋದಿ ಅವರನ್ನು ಭೇಟಿಯಲಿರುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಬರಗಾಲದ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಇದೇ ವೇಳೆ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಅವರನ್ನು ಆಗಸ್ಟ್ 3 ರಂದು ಸಿದ್ದರಾಮಯ್ಯ ಅವರು ಭೇಟಿಯಾಗಿ ವಿಶೇಷ ಕೊಡುಗೆ ನೀಡಿದ್ದರು. ಆದರೆ, ಸಚಿವ ಎಂಬಿ ಪಾಟೀಲ್ ಅವರು ವರ್ಷಾನುಗಟ್ಟಲೆಯಿಂದ ಅವಕಾಶ ಕೊಟ್ಟಿರಲಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯದ ಸಮಸ್ಯೆಗಳು, ರಾಜ್ಯದ ಅನುದಾನದ ಬಗ್ಗೆ ಚರ್ಚೆ ಮಾಡುವುದಕ್ಕೆ ಹೋದಾಗ ಸಮಯ ಕೇಳಿದಾಗ ಕೊಟ್ಟಿರಲಿಲ್ಲ. ಈಗ ಕೊನೆ ಕ್ಷಣದಲ್ಲಿ ಅವಕಾಶ ಕೊಟ್ಟಿದ್ದಾರೆ. ಇನ್ನೂ ಸ್ವಲ್ಪ ದಿನ ಬಿಟ್ಟು ಅವಕಾಶ ಕೊಟ್ಟಿದ್ದರೆ ಕೋಡ್ ಆಫ್ ಕಂಡಕ್ಟ್ ಬಂದು ಬಿಡುತ್ತಿತ್ತು ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.