Monday, April 21, 2025
Google search engine

Homeರಾಜ್ಯದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ದೆಹಲಿ: ಶುಕ್ರವಾರ (ಏಪ್ರಿಲ್ 26) ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ದೇಶಾದ್ಯಂತ 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಡೀ ದೇಶದ ಜನತೆಗೆ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಇದಲ್ಲದೇ ದೇಶದ ಯುವ ಮತದಾರರು ಹಾಗೂ ದೇಶದ ಮಹಿಳಾ ಶಕ್ತಿ ಉತ್ಸಾಹದಿಂದ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಮನವಿ ಮಾಡಿದರು. ಅಸ್ಸಾಮಿ, ಬೆಂಗಾಲಿ, ಮಲಯಾಳಂ, ಕನ್ನಡ, ಹಿಂದಿ, ಇಂಗ್ಲಿಷ್ ಮತ್ತು ಮರಾಠಿ ಏಳು ಭಾಷೆಗಳಲ್ಲಿ ಜನರಿಗೆ ಮನವಿ ಮಾಡಿದ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಹೆಚ್ಚಿನ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ವಿನಂತಿಸುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ ಎಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಮಿ ಭಾಷೆಯಲ್ಲಿ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಅಸ್ಸಾಂನಲ್ಲಿ ನಡೆಯಲಿದೆ.

ಅಕ್ರಮ ವಲಸೆಯನ್ನು ತಡೆಗಟ್ಟುವಲ್ಲಿ ಮತ್ತು ಶಾಂತಿ ಮತ್ತು ಪ್ರಗತಿಯನ್ನು ಖಾತ್ರಿಪಡಿಸುವಲ್ಲಿ ಅಸ್ಸಾಂ ಈಗಾಗಲೇ ಸಾಧಿಸಿರುವ ಯಶಸ್ಸನ್ನು ಮುಂದುವರಿಸುವ ಸರ್ಕಾರ ರಚನೆಗೆ ಮತ ನೀಡುವಂತೆ ನಾನು ರಾಜ್ಯದ ಜನರನ್ನು ಕೋರುತ್ತೇನೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಮನವಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ನಾಗರಿಕರು ತಮ್ಮ ಹಕ್ಕು ಚಲಾಯಿಸುವಂತೆ ಕೇಳಿಕೊಂಡರು ಮತ್ತು ಇದು ಸರ್ವಾಧಿಕಾರದ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular