ನವದೆಹಲಿ: ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪ್ರಕಟಿಸಿದ ಅವರು, ಈ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ .ಇದರಿಂದ ತೀವ್ರ ದುಃಖವಾಗಿದೆ ಎಂದು ತಿಳಿಸಿದರು. ಸಿಲುಕಿರುವವರಿಗೆ ನೆರವು ನೀಡಲು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದಿದ್ದಾರೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಂದ ಅಪಘಾತದ ಕುರಿತು ವಿವರಗಳನ್ನೂ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.