Friday, April 11, 2025
Google search engine

HomeUncategorizedರಾಷ್ಟ್ರೀಯವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ನೇಮಕಗೊಂಡ 71,000 ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ನೇಮಕಗೊಂಡ 71,000 ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ನವದೆಹಲಿ: ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ನೇಮಕಗೊಂಡ 71,000 ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರ ವಿತರಿಸಿದ್ದಾರೆ.

ಉದ್ಯೋಗ ಮೇಳದ ಭಾಗವಾಗಿ ದೇಶದ 41 ಭಾಗಗಳಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಮಾತನಾಡಿ, 71 ಸಾವಿರ ನೇಮಕಾತಿಗಳಲ್ಲಿ 20,901 (29.21%) ಒಬಿಸಿ ಸಮುದಾಯದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11,355 (15.8%) ಪರಿಶಿಷ್ಟ ಜಾತಿ ಮತ್ತು 6,862 (9.59%) ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ನೇಮಕವಾಗಿದ್ದಾರೆ.

2004ರಿಂದ 2014ಕ್ಕೆ ಹೋಲಿಸಿದರೆ, ಕಳೆದ 10 ವರ್ಷಗಳಲ್ಲಿ ಉದ್ಯೋಗದ ಅಂಕಿಅಂಶಗಳು ಶೇ.60 ರಿಂದ ಶೇ.70 ರಷ್ಟು ಹೆಚ್ಚಾಗಿದೆ. 2004ರಿಂದ 2014ರವರೆಗೆ 7,22,161 ನೇಮಕಾತಿ ನಡೆದಿದೆ. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ಸಂಖ್ಯೆ ಸುಮಾರು 11 ಲಕ್ಷಕ್ಕೆ ತಲುಪಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಸರ್ಕಾರದ ಎಲ್ಲಾ ನೀತಿಗಳನ್ನು ರೂಪಿಸುವಾಗ ಯುವಕರಿಗೆ ವಿಶೇಷ ಗಮನ ನೀಡಲಾಗುತ್ತದೆ. ಸರ್ಕಾರವು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ನೀತಿಗಳನ್ನು ಬದಲಿಸಿದೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಉತ್ತೇಜಿಸಿದೆ. ಇಂದು ನಾವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಮಾರ್ಪಟ್ಟಿದ್ದೇವೆ ಎಂದು ಹೇಳಿದರು.

ಇಂದು ಭಾರತವು ಮೊಬೈಲ್ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿದೆ. ನವೀಕರಿಸಬಹುದಾದ ಇಂಧನದಿಂದ ಸಾವಯವ ಕೃಷಿಗೆ, ಬಾಹ್ಯಾಕಾಶದಿಂದ ರಕ್ಷಣಾ ಕ್ಷೇತ್ರಕ್ಕೆ, ಪ್ರವಾಸೋದ್ಯಮದಿಂದ ಸ್ವಾಸ್ಥ್ಯ ಕ್ಷೇತ್ರ ಸೇರಿ ಪ್ರತಿಯೊಂದು ಕ್ಷೇತ್ರದಲ್ಲೂ ಅನುಕೂಲವಾಗಿದೆ. ದೇಶವನ್ನು ಮುನ್ನಡೆಸಲು ಯುವ ಪ್ರತಿಭೆಗಳನ್ನು ಬೆಳೆಸುವ ಅಗತ್ಯವಿದೆ ಎಂದರು.

ನವ ಭಾರತವನ್ನು ನಿರ್ಮಿಸಲು ಆಧುನಿಕ ಶಿಕ್ಷಣ ವ್ಯವಸ್ಥೆಯ ಅಗತ್ಯವಿತ್ತು. ಎನ್ಇಪಿ ಮೂಲಕ ದೇಶವು ಈಗ ಆ ದಿಕ್ಕಿನತ್ತ ಸಾಗಿದೆ. ಅಧ್ಯಯನದ ಸಮಯದಲ್ಲಿ ಗ್ರಾಮೀಣ, ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಯುವಕರಿಗೆ ಭಾಷೆ ತಡೆಗೋಡೆಯಾಗುತ್ತಿತ್ತು. ಈಗ ಮಾತೃಭಾಷೆಯಲ್ಲಿ ಶಿಕ್ಷಣ ಮತ್ತು ಪರೀಕ್ಷೆಯ ನೀತಿಯನ್ನು ಜಾರಿ ಮಾಡಿದೆ. ಸರ್ಕಾರವು ಯುವಕರಿಗೆ 13 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಒದಗಿಸಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular