ಬೆಂಗಳೂರು: ಲೋಕಸಭೆ ಚುನಾವಣೆ 2024ರ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ಮತ್ತು 29 ರಂದು ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ.
ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಲೋಕಸಭೆ ಚುನಾವಣೆಯ ಬಿಜೆಪಿಯ ಪ್ರಚಾರ ಮತ್ತು ಪಕ್ಷದ ರಾಜ್ಯ ಘಟಕ ಗುರುವಾರ ಮಾಹಿತಿ ನೀಡಿದೆ.
ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಯೋಜಕ ವಿ ಸುನೀಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ಬೆಳಿಗ್ಗೆ ಬೆಳಗಾವಿಗೆ ಆಗಮಿಸಿ 10 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಅವರು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಶಿರಸಿಗೆ ತೆರಳುತ್ತಾರೆ ಎಂದರು.