Friday, April 18, 2025
Google search engine

HomeUncategorizedರಾಷ್ಟ್ರೀಯಪ್ರಧಾನಿ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸ: ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಪ್ರಧಾನಿ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸ: ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ತೆರಳಿದರು.

ವಿಲ್ಮಿಂಗ್ಟನ್ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಭಾಗವಹಿಸುತ್ತಿದ್ದಾರೆ. ಸಭೆ ಬಳಿಕ ಮೋದಿ ಅವರು, ಜೋ ಬೈ ಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಅಮೆರಿಕ ಪ್ರವಾಸದ ವೇಳೆ ಕ್ವಾಡ್ ಶೃಂಗಸಭೆ, ಸಮುದಾಯ ಕಾರ್ಯಕ್ರಮ, ಮತ್ತು ಇತರ ದ್ವಿಪಕ್ಷೀ ಯ ಸಭೆಗಳಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋ ದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸೆ.೨೨ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೆ.೨೩ರಂದು ಅವರು ವಿಶ್ವಸಂಸ್ಥೆಯಲ್ಲಿ ವಿವಿಧ ದೇಶಗಳ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

RELATED ARTICLES
- Advertisment -
Google search engine

Most Popular