Friday, April 11, 2025
Google search engine

Homeರಾಜಕೀಯಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ

ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು  ಜನವರಿ 19 ರಂದು ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿಗೆ ತೆರಳಲಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗುತ್ತಾರೆ. ಬಳಿಕ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ಪುನಃ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರುತ್ತಾರೆ

1.05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲಪುತ್ತಾರೆ. 2.15ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸುತ್ತಾರೆ.

2.45ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿರುವ ಪ್ರಧಾನಿ ಮೋದಿ, ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.45ಕ್ಕೆ ಭಟ್ಟರ ಮಾರನಹಳ್ಳಿಯಿಂದ ನಿರ್ಗಮಿಸಿ, 3.55ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ತೆರಳಲಿದ್ದಾರೆ.

ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರೋಡ್​ ಶೋ ಕೂಡ ನಡೆಸುವ ಸಾಧ್ಯತೆ ಇದೆ. ಆದರೆ, ರೋಡ್​ ಶೋ ಸಂಬಂಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ.

RELATED ARTICLES
- Advertisment -
Google search engine

Most Popular