ವರದಿ :ಸ್ಟೀಫನ್ ಜೇಮ್ಸ್.
ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಗವದ್ಗೀತೆಯ 15ನೇ ಅಧ್ಯಾಯದ ಕೆಲವು ಶ್ಲೋಕಗಳನ್ನು ಪಠಿಸಿದರು.
ಉಡುಪಿ: ಕೃಷ್ಣಾನೂರು ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಉಡುಪಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ್ದಾರೆ.
ಕೃಷ್ಣಮಠಕ್ಕೆ ಭೇಟಿ ನೀಡಿದ ನಂತರ ಸಭಾಂಗಣಕ್ಕೆ ಆಗಮಿಸಿದ ಮೋದಿಯವರಿಗೆ ಜಗದ್ಗುರು ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಸನ್ಮಾನಿಸಿದರು. ನಂತರ ಲಕ್ಷ ಕಂಠ ಗೀತಾ ಕಾರ್ಯಕ್ರಮದಲ್ಲಿ ಭಾಗಿಯಾದ ಮೋದಿಯವರು, ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್, ಸಚಿವ ಬೈರತಿ ಸುರೇಶ್, ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇತರರು ವೇದಿಕೆಯಲ್ಲಿದ್ದಾರೆ.
ಉಡುಪಿ-ಬನ್ನಂಜೆಯ ಡಾ.ವಿ.ಎಸ್.ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ನಿಂದ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಅವರಿಗೆ ಪುಷ್ಪವೃಷ್ಟಿ ಸ್ವಾಗತ ಕೋರಲಾಯಿತು.
ರಸ್ತೆ ಬದಿ ಕಾದು ನಿಂತು ಪ್ರಧಾನಿ ಅವರನ್ನು ಸಾರ್ವಜನಿಕರು ಸ್ವಾಗತಿಸಿದರು. ರೋಡ್ ಶೋ ಮೂಲಕ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಆಗಮಿಸಿದರು.

ಮಠದಲ್ಲಿ ಶ್ರೀ ಕೃಷ್ಣ ದರ್ಶನ. ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಪ್ರಧಾನಿ ಅನಾವರಣಗೊಳಿಸಿದರು.
ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 15ನೇ ಅಧ್ಯಾಯದ ಕೆಲವು ಶ್ಲೋಕಗಳನ್ನು ಪಠಿಸಿದರು.



