Monday, April 28, 2025
Google search engine

Homeರಾಜ್ಯಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜಿನಾಮೆ ಕೊಟ್ಟ ಪಿಎಂ ಪ್ರಸನ್ನ!

ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜಿನಾಮೆ ಕೊಟ್ಟ ಪಿಎಂ ಪ್ರಸನ್ನ!

ಮೈಸೂರು: ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ(ಮೈಮುಲ್) ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ ಪ್ರಸನ್ನ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಪಿ.ಎಂ ಪ್ರಸನ್ನ ಕುಮಾರ್‌ ಅವರು ಪಿರಿಯಾಪಟ್ಟಣ ಮಾಜಿ ಶಾಸಕ ಕೆ.ಮಹದೇವ‌ ಅವರ ಪುತ್ರರಾಗಿದ್ದು 2021ರಲ್ಲಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ. (ಮೈಮುಲ್‌) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ ಇದೀಗ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಅವರ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ ಪ್ರಸನ್ನ ಅವರು ಸಚಿವರು ಕಳೆದ 6 ತಿಂಗಳಲ್ಲಿ 24 ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಬಹಿರಂಗವಾಗಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಸನ್ನ ಅವರು ದಿಢೀರ್ ಅಂತ ತಮ್ಮ ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ‌.

RELATED ARTICLES
- Advertisment -
Google search engine

Most Popular