Tuesday, December 2, 2025
Google search engine

Homeರಾಜಕೀಯಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್​ : ಸುಪ್ರೀಂಕೋರ್ಟ್ ಮೊರೆಹೋದ ಬಿಎಸ್​ವೈ

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್​ : ಸುಪ್ರೀಂಕೋರ್ಟ್ ಮೊರೆಹೋದ ಬಿಎಸ್​ವೈ

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿತ್ತು. ಕೋರ್ಟ್ ಆದೇಶದ ಪ್ರಕಾರ ಇಂದೇ ಯಡಿಯೂರಪ್ಪ ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ ಇದೀಗ ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು, ಸಮನ್ಸ್ ರದ್ದು ಮಾಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್​ ಯಡಿಯೂರಪ್ಪ ಅರ್ಜಿ ವಜಾಗೊಳಿಸಿತ್ತು. ಇದೀಗ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಖುದ್ದು ಕೋರ್ಟ್​ಗೆ ಹಾಜರಾಗಬೇಕಾಗಿರೋ ಯಡಿಯೂರಪ್ಪ, ಇಂದೇ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದು, ಮೇಲ್ಮನವಿ ಅರ್ಜಿ ವಿಚಾರಣೆ ನಿಗದಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular