Friday, April 4, 2025
Google search engine

Homeಅಪರಾಧಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ನಿರೀಕ್ಷಣಾ ಜಾಮೀನು ಮಂಜೂರು

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ನಿರೀಕ್ಷಣಾ ಜಾಮೀನು ಮಂಜೂರು

ಧಾರವಾಡ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು.

ವಿಚಾರಣೆ ಆರಂಭವಾದ ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ ಹೀಗಾಗಿ ಯಡಿಯೂರಪ್ಪ ಅವರು ಬಂಧನದ ಭೀತಿಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಇದೊಂದು ಬಿಗ್ ರಿಲೀಫ್ ಸಿಕ್ಕಂತಾಗಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

ಈ ಒಂದು ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ. ಆರೋಪ ಪಟ್ಟಿ ರದ್ದುಪಡಿಸಲು ಹೈಕೋರ್ಟ್ ನಕಾರ. ಹಾಗಾಗಿ ಬಿ ಎಸ್ ಯಡಿಯೂರಪ್ಪ ಹೈಕೋರ್ಟ್ ವಿಚಾರಣೆಗೆ ಒಳಪಡಲಿದ್ದಾರೆ. 2024ರ ಜುಲೈ 4ರ ಪೋಕ್ಸೋ ಕೋರ್ಟ್ ಆದೇಶ ರದ್ದುಗೊಳಿಸಿದ್ದು, ವಿಚಾರಣಾ ನ್ಯಾಯಾಲಯಕ್ಕೆ ಬಿ ಎಸ್ ಯಡಿಯೂರಪ್ಪ ಕೇಸ್ ಅನ್ನು ಹೈಕೋರ್ಟ್ ಇದೀಗ ಮರಳಿಸಿದೆ. ಅರ್ಹತೆ ಆಧಾರದಲ್ಲಿ ಯಾವುದೇ ಆದೇಶವನ್ನು ಹೈಕೋರ್ಟ್ ನೀಡಿಲ್ಲ. ತಾಂತ್ರಿಕ ಕಾರಣಕ್ಕೆ ಪೋಕ್ಸೋ ಕೇಸ್ ಕೋರ್ಟಿಗೆ ವಾಪಾಸ್ ಕಳಿಸಿದ್ದು, ಈ ಹಿನ್ನೆಲೆಯಲ್ಲಿ ಪೋಕ್ಸೋ ಕೋರ್ಟ್ ನಲ್ಲಿ ಬಿಎಸ್ ಯಡಿಯೂರಪ್ಪ ವಿಚಾರಣೆ ಎದುರಿಸಬೇಕಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ.

ಫೆ. 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

RELATED ARTICLES
- Advertisment -
Google search engine

Most Popular