ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಇಂದು ಭಾನುವಾರ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ನಟೋರಿಯಸ್ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕ ಎಂಬಾತನ ಮೇಲೆ ಹಲಗೂರು ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ಕೊಲೆ, ಕೊಲೆಯತ್ನ ಹಾಗೂ ರೌಡಿ ಚಟುವಟಿಕೆಗಳು ಸೇರಿದಂತೆ ೫ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮುತ್ತುರಾಜ್ ಅಲಿಯಾಸ್ ಡಕ್ಕನನ್ನು ಖಚಿತ ಮಾಹಿತಿ ಮೇರೆಗೆ ಭಾನುವಾರ ಬೆಳ್ಳಂಬೆಳಿಗ್ಗೆ ಅರೆಸ್ಟ್? ಮಾಡಲು ಹೋದಾಗ ಸಿಬ್ಬಂದಿ ಸಿದ್ದರಾಜು ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.
ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಪೊಲೀಸರು ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ವಾರ್ನಿಂಗ್ ಮಾಡಿದ್ದಾರೆ. ಆದರೂ ಸಹ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದದಾಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಹಲಗೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.