ಮೈಸೂರು : ಮನೆಯ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಈ ಒಂದು ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದು ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ, ಮೈಸೂರಿನ ಬಸವ ಗುಡಿಯ ಬಳಿ ನಡೆದಿದೆ.
ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯ ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು, ಈ ಕುರಿತಂತೆ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಪರುಶು ಪೊಲೀಸರಿಗೆ ಮಾಹಿತಿ ನೀಡಿದರು.
ಕೊಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಎಸಿಪಿ ಗಜೇಂದ್ರ ಪ್ರಸಾದ ನೇತೃತ್ವದಲ್ಲಿ ಮನೆಯ ಮೇಲೆ ದಾಳಿ ಮಾಡಿದರು. ಈ ವೇಳೆ ಹಾಸನ, ಮೈಸೂರು ಹಾಗೂ ಕೆ ಆರ್ ನಗರದ ಮೂಲದ ಐವರು ಮಹಿಳೆಯರನ್ನು ರಕ್ಷಣೆ ಮಾಡಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗೂ ಓರ್ವ ಗ್ರಾಹಕರನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.