Friday, April 11, 2025
Google search engine

Homeರಾಜ್ಯದರ್ಶನನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುವುದನ್ನ ಪೊಲೀಸರು ತೀರ್ಮಾನಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ದರ್ಶನನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುವುದನ್ನ ಪೊಲೀಸರು ತೀರ್ಮಾನಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಬಿಂದಾಸ್ ಆಗಿ ಇರುವ ಫೋಟೋ ಇತ್ತೀಚಿಗೆ ವೈರಲ್ ಆಗಿತ್ತು. ಈ ಕುರಿತಾಗಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವುದರ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನು ಪೊಲೀಸರು ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾವು ೯ ಜನ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ದೇವೆ. ಇನ್ನು ಯಾರನ್ನಾದರೂ ಮಾಡಬೇಕಾದರೆ ಮಾಡುತ್ತೇವೆ. ಅಲ್ಲದೆ ನ್ಯಾಯಾಲಯದ ಆಧಾರದ ಮೇಲೆ ಬೇರೆ ಜೈಲಿಗೆ ಕಳುಹಿಸಬೇಕೆಂದರೆ ಕಳುಹಿಸುತ್ತೇವೆ. ನಟ ದರ್ಶನ್ ಸೇರಿದಂತೆ ಇತರೇ ಆರೋಪಿಗಳನ್ನು ಯಾವ ಜಿಲ್ಲೆಗೆ ಶಿಫ್ಟ್ ಮಾಡಬೇಕೆಂಬುವುದನ್ನು ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ನಂತರ ಅಲ್ಲಿಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular