ಮಂಡ್ಯ: ಮನ್ಮುಲ್ ನಿರ್ದೇಶಕಿ ರೂಪಗೆ ರಾಜಕೀಯ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಹಕಾರ ಸಂಘದ ಎ ಆರ್ ವನಿತಾ ವಿರುದ್ಧ ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟದ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಮಂಡ್ಯ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಮುಖಂಡ ಅಶೋಕ್ ಜಯರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎ ಆರ್ ವನಿತಾ ಹಾಗೂ ಸಚಿವ ಚಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಹಕಾರ ಸಂಘದ ಕಚೇರಿ ಬಳಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದು, ಸಹಕಾರ ಸಂಘದ ಎ ಆರ್ ವನಿತಾ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ
ಇದೆ ವೇಳೆ ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕಿ ರೂಪ ಅವರಿಗೆ ರಾಜಕೀಯ ಕಿರುಕುಳ ಕೊಡುತ್ತಿದ್ದಾರೆ. ಬಿಜೆಪಿಯಿಂದ ರೂಪ ಅವರು ಗೆದ್ದಿದ್ದಾರೆ. ರಾಜಕೀಯ ಷಡ್ಯಂತ್ರದಿಂದ ರೂಪ ಅವರನ್ನ ವಜಾಮಾಡಲು ಕಾಂಗ್ರೆಸ್ ಪಿತೂರಿ. ಸುಪ್ರೀಂ ಕೋರ್ಟ್ ನಲ್ಲಿ ರೂಪ ಅವರ ಪರ ಇದೆ. ಜೊತೆಗೆ ಸುಪ್ರೀಂ ಕೋರ್ಟ್ ನಲ್ಲಿದ್ದರು ಕಾಂಗ್ರೆಸ್ ನಿಂದ ವಜಾಗೊಳಿಸಲು ಅಧಿಕಾರಿಗಳು ಹಾಗೂ ಶಾಸಕರಿಂದ ಒತ್ತಡ ಹಾಕಲಾಗುತ್ತಿದೆ.ಯಾವುದೇ ಕಾರಣಕ್ಕು ರೂಪ ಅವರನ್ನ ಮನ್ ಮುಲ್ ಆಡಳಿತ ಮಂಡಳಿಯಿಂದ ವಜಾಗೊಳಿಸದಂತೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದಾರೆ.