Saturday, April 19, 2025
Google search engine

Homeರಾಜಕೀಯರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿ: ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ನೇಹಾ ಕೊಲೆ ಪ್ರಕರಣದ ತನಿಖೆ ಪ್ರಾಮಾಣಿಕವಾಗಿ ನಡೆಸುವುದು ಅನುಮಾನ. ಹೀಗಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು ಎಂದು ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇಹಾ ತಂದೆ ನಿರಂಜನ‌ ಅವರು ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು  ಅಸಹಾಯಕರಾಗುತ್ತಿದ್ದಾರೆ ಎಂದು ಆರೋಪಿಸಿದರು.

‘ಬಿಜೆಪಿಯವರಿಗೆ ಹಿಂದುಗಳ ಕೊಲೆಯಾಗದೆ ಹಬ್ಬ’ ಎನ್ನುವ ಸಚಿವ ಸಂತೋಷ ಲಾಡ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ನೇಹಾ ಅವರನ್ನು ಒಂದು ಜಾತಿಗೆ ಸಿಮೀತ, ಮಾಡಬೇಡಿ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ರಕ್ಷಣೆ ಕೊಡಲು ಆಗಿಲ್ಲ, ಅದರಿಂದ ಯುವತಿಯ ಕೊಲೆ ಆಗಿದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ಕಿಡಿಕಾರಿದರು.

RELATED ARTICLES
- Advertisment -
Google search engine

Most Popular