ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಹಿರಿಯ ನಟಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಬಣ್ಣದ ಲೋಕದಲ್ಲಿ 5 ದಶಕಗಳ ಕಾಲ ಸಕ್ರಿಯವಾಗಿದ್ದ ವಹೀದಾ ರೆಹಮಾನ್ ಅವರು 90ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮನಮೋಹಕವಾದ ತಮ್ಮ ಅಭಿನಯದ ಮೂಲಕ ಅವರು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಹೆಚ್ಚಾಗಿ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಅವರು ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆದ ಬಳಿಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ವಹೀದಾ ರೆಹಮಾನ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.