Saturday, April 19, 2025
Google search engine

Homeರಾಜ್ಯಜನಸಂಖ್ಯೆ ನಿಯಂತ್ರಣ ಅಸಾಧ್ಯ, ಸಮಾಜದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ

ಜನಸಂಖ್ಯೆ ನಿಯಂತ್ರಣ ಅಸಾಧ್ಯ, ಸಮಾಜದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ

ದಾವಣಗೆರೆ: ಜನಸಂಖ್ಯೆ ಹೆಚ್ಚಳದಿಂದ ಸಮಾಜದ ಆರೋಗ್ಯ, ಜನರ ಮೂಲಭೂತ ಸೌಕರ್ಯಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಕುವೆಂಪು ಭವನದಲ್ಲಿ ಮಂಗಳವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಜುಲೈ. 11ನ್ನು ಪ್ರತಿ ವರ್ಷ ವಿಶ್ವ ಜನಸಂಖ್ಯಾ ದಿನವನ್ನಾಗಿ ಆಚರಿಸಲಾಗುತ್ತದೆ. ಚೀನಾವನ್ನು ಸೋಲಿಸುವ ಮೂಲಕ ಭಾರತ ವಿಶ್ವದ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. 1947 ರಲ್ಲಿ, ಶಿಶು ಮರಣ, ತಾಯಿ ಸಾವು, ಸಾಮಾನ್ಯ ಜನರ ಸಾವಿನ ಸಂಖ್ಯೆ ಹೆಚ್ಚಾಯಿತು. ಇತ್ತೀಚಿನ ದಿನಗಳಲ್ಲಿ, ವೈದ್ಯಕೀಯ ಸೌಲಭ್ಯಗಳು ತಮ್ಮ ಆರೋಗ್ಯವನ್ನು ಸುಧಾರಿಸಿದೆ ಮತ್ತು ಸಾವಿನ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಜನರು ಹೇಳಿದರು. ಪ್ರಾಣಿಗಳು, ಪಕ್ಷಿಗಳು, ಸಸ್ಯಗಳು ಮತ್ತು ಮರಗಳು ಸಹ ಮನುಷ್ಯರಂತೆ ಜಗತ್ತಿನಲ್ಲಿ ವಾಸಿಸುವ ಹಕ್ಕನ್ನು ಹೊಂದಿವೆ, ಆದರೆ ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆಯ ಹೆಚ್ಚಳವು ಪರಿಸರ ಮತ್ತು ಜೈವಿಕ ಸಂಪನ್ಮೂಲಗಳು, ಆರೋಗ್ಯ ಮತ್ತು ಉತ್ಪಾದನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಜನರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್ ಮಾತನಾಡಿ, ಜನಸಂಖ್ಯೆ ನಿಯಂತ್ರಣ, ಆರೋಗ್ಯ, ದಕ್ಷ ದೇಶ ಮಾಡಲು ಕುಟುಂಬ ಕಲ್ಯಾಣ ಯೋಜನೆಗಳ ಪಾತ್ರ ಮಹತ್ವದ್ದು. ಜನಸಂಖ್ಯೆಯ ಹೆಚ್ಚಳವು ನೈಸರ್ಗಿಕ ಅಸಮತೋಲನ, ರೋಗಗಳು, ಜನರಿಗೆ ಮೂಲಸೌಕರ್ಯಗಳ ಕೊರತೆ, ಚರಂಡಿ ನಿರ್ಮಾಣಕ್ಕೆ ಕಾರಣವಾಗುತ್ತದೆ. ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯೊಂದಿಗೆ ಜನಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿದ್ಯಾರ್ಥಿಗಳು ಸಮಾಜದಲ್ಲಿ ಹೆಚ್ಚಿನ ರೀತಿಯಲ್ಲಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಜಾಗೃತರಾಗಬೇಕು ಎಂದರು. ಈ ಸಂದರ್ಭದಲ್ಲಿ ವಿಶ್ವ ಜನಸಂಖ್ಯಾ ದಿನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಜಾಗೃತಿ ಜಾಥಾ: ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಚಿಕ್ಕ ಕುಟುಂಬ, ಚೊಕ್ಕ ಕುಟುಂಬ, ಯೋಜಿತ ಕುಟುಂಬ, ಸುಖ ಸಮೃದ್ಧಿ, ಹೆಣ್ಣಿರಲಿ, ಗಂಡಿರಲಿ ಎಂಬ ಘೋಷಣೆಯೊಂದಿಗೆ ಜಾಥಾವು ವಿದ್ಯಾನಗರದ ಹದಡಿ ರಸ್ತೆಯ ಇಡಿ ಕಾಲೇಜು ಮೂಲಕ ಸಾಗಿತು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಾನಾಯ್ಕ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ನಟರಾಜ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಮುರುಳೀಧರ್, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಮೀನಾಕ್ಷಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ್ ಪಾಟೀಲ, ತರಳಬಾಳು ಬಿ.ಇಡಿ ಕಾಲೇಜು ಪ್ರಾಂಶುಪಾಲರು. ಡಾ.ಕೆ.ಟಿ.ನಾಗರಾಜ್ ನಾಯ್ಕ್, ಮಿಥುನ್, ಆಶಾ ಕಾರ್ಯಕರ್ತೆಯರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular